ಬ್ರೇಕಿಂಗ್
ಎಸ್‌ಐಆರ್ (SIR) ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಿದೆ ಸಚಿವ ಸತೀಶ್ ಜಾರಕಿಹೊಳಿ ವೈಜ್ಞಾನಿಕತೆ ಶಿಕ್ಷಣದಲ್ಲಿ ಬರದೆ ಹೋದರೆ ಮೌಢ್ಯಗಳು ಹಾಗೆ ಮುಂದುವರಿಯುವಂತ ಕೆಲಸಗಳು ನಡೆಯುತ್ತದೆ - ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ 60 ಸಾವಿರ ಬೀದಿ ವ್ಯಾಪಾರಸ್ಥರಿಗೆ ಗುರುತಿನ ಚೀಟಿ ಮೂಲಕ ಪರ್ಯಾಯ ವ್ಯವಸ್ಥೆ : ಮುಖ್ಯಮಂತ್ರಿ ಕುಡಿಯುವ ನೀರಿನ ಸಮಸ್ಯೆಯ ನಿಭಾವಣೆಗೆ ಗ್ರಾಮೀಣ ಪ್ರದೇಶದ ಪ್ರತಿ‌ಕ್ಷೇತ್ರದ ಶಾಸಕರಿಗೆ ತಲಾ ಒಂದು ಕೋಟಿ ಅನುದಾನ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್  ಭಾರತ ಜೋಡೋ ಯುವಕ ಸಂಘ ಸ್ಥಾಪನೆಗೆ ಸಾವಿರ ಕೋಟಿ ರೂಪಾಯಿ ಮೀಸಲು - ಡಿ.ಕೆ. ಶಿವಕುಮಾರ ಜನರ ಅಹವಾಲು ಪರಿಹರಿಸಲು ಪ್ರಜಾಸೇವಾ ಇಲಾಖೆ : ಪ್ರತ್ಯೇಕ ಮಂತ್ರಿಯೊಬ್ಬರ ನಿಯೋಜಿನೆ- ಮುಖ್ಯಮಂತ್ತಿ ಡಿ.ಕೆ.ಶಿವಕುಮಾರ್ ಬೆಳಗಾವಿ ಅರಣ್ಯ ವಲಯದ 7 ಜಲಪಾತ ವೀಕ್ಷಣೆಗೆ  ಇನ್ನೊಂದು ತಿಂಗಳಲ್ಲಿ ಪರಿಸರ ಸ್ನೇಹಿ ಇಕೋ ಟೂರಿಸಂ ಅವಕಾಶ : ಜಿಲ್ಲಾಧಿಕಾರಿ ಮೊಹಮ್ಮದ ರೋಷನ್‌   ಬೆಳಗಾವಿ ಜಿಲ್ಲೆಯಲ್ಲಿ ಉತ್ತಮ ಮಳೆ: ಮೈದುಂಬಿ ಹರಿಯುತ್ತಿರುವ ನದಿಗಳು; ಕೆಳ ಹಂತದ ೭ ಸೇತುವೆಗಳು ಜಲಾವೃತ್ತ ಶರಣರ ಅನುಭವ ಮಂಟಪಕ್ಕೆ ಭೆಟ್ಟಿ ನೀಡಿದ AI ರೇಖಾ ಚಿತ್ರಗಳನ್ನು ಹಂಚಿಕೊಂಡ ಮುಖ್ಯಮಂತ್ರಿ ಅಂಗನವಾಡಿಯಿಂದ ಪಿಯುಸಿ ವರೆಗೂ ನಾಳೆ ರಜೆ ಎಸ್‌ಐಆರ್ (SIR) ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಿದೆ ಸಚಿವ ಸತೀಶ್ ಜಾರಕಿಹೊಳಿ ವೈಜ್ಞಾನಿಕತೆ ಶಿಕ್ಷಣದಲ್ಲಿ ಬರದೆ ಹೋದರೆ ಮೌಢ್ಯಗಳು ಹಾಗೆ ಮುಂದುವರಿಯುವಂತ ಕೆಲಸಗಳು ನಡೆಯುತ್ತದೆ - ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ 60 ಸಾವಿರ ಬೀದಿ ವ್ಯಾಪಾರಸ್ಥರಿಗೆ ಗುರುತಿನ ಚೀಟಿ ಮೂಲಕ ಪರ್ಯಾಯ ವ್ಯವಸ್ಥೆ : ಮುಖ್ಯಮಂತ್ರಿ ಕುಡಿಯುವ ನೀರಿನ ಸಮಸ್ಯೆಯ ನಿಭಾವಣೆಗೆ ಗ್ರಾಮೀಣ ಪ್ರದೇಶದ ಪ್ರತಿ‌ಕ್ಷೇತ್ರದ ಶಾಸಕರಿಗೆ ತಲಾ ಒಂದು ಕೋಟಿ ಅನುದಾನ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್  ಭಾರತ ಜೋಡೋ ಯುವಕ ಸಂಘ ಸ್ಥಾಪನೆಗೆ ಸಾವಿರ ಕೋಟಿ ರೂಪಾಯಿ ಮೀಸಲು - ಡಿ.ಕೆ. ಶಿವಕುಮಾರ ಜನರ ಅಹವಾಲು ಪರಿಹರಿಸಲು ಪ್ರಜಾಸೇವಾ ಇಲಾಖೆ : ಪ್ರತ್ಯೇಕ ಮಂತ್ರಿಯೊಬ್ಬರ ನಿಯೋಜಿನೆ- ಮುಖ್ಯಮಂತ್ತಿ ಡಿ.ಕೆ.ಶಿವಕುಮಾರ್ ಬೆಳಗಾವಿ ಅರಣ್ಯ ವಲಯದ 7 ಜಲಪಾತ ವೀಕ್ಷಣೆಗೆ  ಇನ್ನೊಂದು ತಿಂಗಳಲ್ಲಿ ಪರಿಸರ ಸ್ನೇಹಿ ಇಕೋ ಟೂರಿಸಂ ಅವಕಾಶ : ಜಿಲ್ಲಾಧಿಕಾರಿ ಮೊಹಮ್ಮದ ರೋಷನ್‌   ಬೆಳಗಾವಿ ಜಿಲ್ಲೆಯಲ್ಲಿ ಉತ್ತಮ ಮಳೆ: ಮೈದುಂಬಿ ಹರಿಯುತ್ತಿರುವ ನದಿಗಳು; ಕೆಳ ಹಂತದ ೭ ಸೇತುವೆಗಳು ಜಲಾವೃತ್ತ ಶರಣರ ಅನುಭವ ಮಂಟಪಕ್ಕೆ ಭೆಟ್ಟಿ ನೀಡಿದ AI ರೇಖಾ ಚಿತ್ರಗಳನ್ನು ಹಂಚಿಕೊಂಡ ಮುಖ್ಯಮಂತ್ರಿ ಅಂಗನವಾಡಿಯಿಂದ ಪಿಯುಸಿ ವರೆಗೂ ನಾಳೆ ರಜೆ
11 ಜುಲೈ 2026
ಬೆಳಗಾವಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ : 397  ಕಾಳಜಿ ಕೇಂದ್ರಗಳ ಸೌಲಭ್ಯ ಪರಿಶೀಲನೆಗೆ ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ ಸೂಚನೆ
📄 ಬೆಳಗಾವಿ ಜಿಲ್ಲೆಯ ಸುದ್ದಿ
Dr. K N Doddmani · · 23 ವೀಕ್ಷಣೆಗಳು

ಬೆಳಗಾವಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ : 397  ಕಾಳಜಿ ಕೇಂದ್ರಗಳ ಸೌಲಭ್ಯ ಪರಿಶೀಲನೆಗೆ ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ ಸೂಚನೆ

ಜಿಲ್ಲೆಯಲ್ಲಿ ಸಂಭವನೀಯ ಪ್ರವಾಹ ಪರಿಸ್ಥಿತಿಯಲ್ಲಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಎಸ್.ಡಿ.ಆರ್.ಎಫ್.‌ನ 5, ಅಗ್ನಿಶಾಮಕ ಇಲಾಖೆಯ 9, ತಾಲೂಕಿನಲ್ಲಿ 27 ಸೇರಿದಂತರ  ಒಟ್ಟು 41 ಬೋಟುಗಳು‌ ಲಭ್ಯವಿರುತ್ತವೆ. ಸಂಭವನೀಯ ಪ್ರವಾಹ ಸಂದರ್ಭದಲ್ಲಿ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಜಿಲ್ಲೆಯಲ್ಲಿ 397 ಪರಿಹಾರ ಕೇಂದ್ರ ಹಾಗೂ 129 ಗೋಶಿಬಿರಗಳನ್ನು ಗುರುತಿಸಲಾಗಿದೆ  ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಅಸ್ಮಿತೆ ವರದಿ, ಜು.07: ಬೆಳಗಾವಿ ಜಿಲ್ಲೆಯಲ್ಲಿ ಅತೀವೃಷ್ಠಿಯಿಂದಾಗಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಗುರುತಿಸಲಾದ 397 ಕಾಳಜಿ ಕೇಂದ್ರಗಳಲ್ಲಿ ಅಗತ್ಯ ಸೌಲಭ್ಯಗಳ ಕುರಿತು ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್‌ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ‌ ಸಭಾಂಗಣದಲ್ಲಿ ಇಂದು ಜರುಗಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಮಾತನಾಡಿದ ಅವರು,  ಕಳೆದ ಮೂರು ದಿನಗಳಿಂದ ನೆರೆಯ ಮಹಾರಾಷ್ಟ್ರ ಹಾಗೂ ಬೆಳಗಾವಿ ಜಿಲ್ಲೆಯ ಒಂಭತ್ತು ತಾಲೂಕುಗಳಲ್ಲಿ ವ್ಯಾಪಕ ಮಳೆ ಆಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ನದಿ ಪಾತ್ರದ ಗ್ರಾಮಗಳಲ್ಲಿ ಎದುರಾಗಬಹುದಾದ ಸಂಭವನೀಯ ಪ್ರವಾಹ ಪರಿಸ್ಥಿತಿ  ನಿರ್ವಹಣೆಗೆ ಅಧಿಕಾರಿಗಳು ಸನ್ನದ್ಧರಾಗಿರಬೇಕು ಎಂದು ಸೂಚಿಸಿದರು.

ಜಿಲ್ಲೆಯ ನದಿ ಪಾತ್ರಗಳಲ್ಲಿ ಮಳೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸೇತುವೆಗಳು ಮುಳಗುವ‌ ಭೀತಿ‌ ಇದ್ದು ಅಂತಹ ಸೇತುವೆಗಳ ಮೇಲೆ ಜನ, ಜಾನುವಾರು ಸಂಚಾರ ನಿರ್ಬಂಧಿಸಬೇಕು.  ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಬೋಟಗಳ ವ್ಯವಸ್ಥೆ ಮಾಡಿಟ್ಟುಕೊಳ್ಳಬೇಕು. ಎಸ್.ಡಿ.ಆರ್.ಎಫ್ ಹಾಗೂ ಅಗ್ನಿ ಶಾಮಕ ತಂಡಗಳು ಪ್ರವಾಹದಂತಹ ಪರಿಸ್ಥಿತಿಯನ್ನು ಎದುರಿಸಲು ಸದಾ ಸನ್ನದ್ಧವಾಗಿರಬೇಕು. ತಹಶಿಲ್ದಾರರುಗಳು  ಎಸ್.ಡಿ.ಆರ್.ಎಫ್. ತಂಡದೊಂದಿಗೆ ನಿರಂತರ ಸಮನ್ವಯ ಸಾಧಿಸಿ,  ಅಗತ್ಯವಿದ್ದಲ್ಲಿ ಕೂಡಲೇ  ಮಾಹಿತಿ ನೀಡಲು ಸೂಚಿಸಿದರು.

ಜಿಲ್ಲೆಯಲ್ಲಿ ಕ್ರಮೇಣ ಮಳೆ‌ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೂಡಲೆ ಜಿಲ್ಲಾ  ಹಾಗೂ ತಾಲೂಕು‌ ಮಟ್ಟದಲ್ಲಿ  ಸಹಾಯವಾಣಿ ಕೇಂದ್ರ ಸ್ಥಾಪಿಸಬೇಕು. ಗ್ರಾಮೀಣ ಪ್ರದೇಶಗಳಲ್ಲಿ  ವಿದ್ಯುತ್ ಕಂಬ, ವಿದ್ಯುತ್ ಪರಿವರ್ತಕ ಹಾಗೂ ವಿದ್ಯುತ್ ತಂತಿಗಳ ದುರಸ್ತಿ ಕಾರ್ಯ ಕೈಗೊಳ್ಳಬೇಕು. ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ‌ಮಳೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಅಲ್ಲಿನ ಜಲಾಶಯಗಳಿಂದ ನೀರು ಬಿಡುಗಡೆ ಮಾಡಲಾಗುತ್ತಿದೆ. ಈ ಕುರಿತು ಅಲ್ಲಿನ ಅಧಿಕಾರಿಗಳೊಂದಿಗೆ ನಿರಂತರ‌ ಸಂಪರ್ಕ ಸಾಧಿಸಲು ಜಿಲ್ಲೆಯ ಓರ್ವ‌ ಅಧಿಕಾರಿಯನ್ನು ನೇಮಿಸಿ ನಿರಂತರ‌ ಮಾಹಿತಿ‌ ಪಡೆಯಲು ತಿಳಿಸಿದರು.

ಜಿಲ್ಲೆಯಲ್ಲಿ ಸಂಭವನೀಯ ಪ್ರವಾಹ ಪರಿಸ್ಥಿತಿಯಲ್ಲಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಎಸ್.ಡಿ.ಆರ್.ಎಫ್.‌ನ 5, ಅಗ್ನಿಶಾಮಕ ಇಲಾಖೆಯ 9, ತಾಲೂಕಿನಲ್ಲಿ 27 ಸೇರಿದಂತರ  ಒಟ್ಟು 41 ಬೋಟುಗಳು‌ ಲಭ್ಯವಿರುತ್ತವೆ. ಸಂಭವನೀಯ ಪ್ರವಾಹ ಸಂದರ್ಭದಲ್ಲಿ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಜಿಲ್ಲೆಯಲ್ಲಿ 397 ಪರಿಹಾರ ಕೇಂದ್ರ ಹಾಗೂ 129 ಗೋಶಿಬಿರಗಳನ್ನು ಗುರುತಿಸಲಾಗಿದೆ  ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಸಭೆಯಲ್ಲಿ ಪೋಲಿಸ್ ಆಯುಕ್ತ ಭೋರಸೆ ಗುಲಾಬರಾವ್ ಭೂಷಣ, ಜಿಲ್ಲಾ‌ ಪೋಲಿಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಪ್ರಶಿಕ್ಷಣಾರ್ಥಿ ಆಯ್.ಎ.ಎಸ್. ಅಧಿಕಾರಿ ರೋಹಿತ್ ಸಿಂಗ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ತಹಶೀಲ್ದಾರರು ಹಾಜರಿದ್ದರು.

****

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

ಎಸ್‌ಐಆರ್ (SIR) ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಿದೆ ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ ಜಿಲ್ಲೆಯ ಸುದ್ದಿ

ಎಸ್‌ಐಆರ್ (SIR) ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಿದೆ ಸಚಿವ ಸತೀಶ್ ಜಾರಕಿಹೊಳಿ

ಅರ್ಹ ಮತದಾರರಿಗೆ ಅಗತ್ಯ ನೆರವು ನೀಡಿ, ಯಾವುದೇ ಅರ್ಹ ವ್ಯಕ್ತಿಯ ಹೆಸರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಜಾಗೃತಿ ಮೂಡಿಸೋಣ. ಪ್ರಜಾಪ್ರಭುತ್ವವನ್ನು ಬಲಪಡಿಸೋಣ... ಪ್ರತಿಯೊಬ್ಬ ಅರ್ಹ ಮತದಾರನ ಹಕ್ಕನ್ನು ಸಂರಕ್ಷಿಸೋಣ ಎಂದು ಸೂಚಿಸಿದ್ದಾರೆ

Admin
ಬೆಳಗಾವಿ ಜಿಲ್ಲೆಯಲ್ಲಿ ಉತ್ತಮ ಮಳೆ: ಮೈದುಂಬಿ ಹರಿಯುತ್ತಿರುವ ನದಿಗಳು; ಕೆಳ ಹಂತದ ೭  ಸೇತುವೆಗಳು ಜಲಾವೃತ್ತ ಬೆಳಗಾವಿ ಜಿಲ್ಲೆಯ ಸುದ್ದಿ

ಬೆಳಗಾವಿ ಜಿಲ್ಲೆಯಲ್ಲಿ ಉತ್ತಮ ಮಳೆ: ಮೈದುಂಬಿ ಹರಿಯುತ್ತಿರುವ ನದಿಗಳು; ಕೆಳ ಹಂತದ ೭ ಸೇತುವೆಗಳು ಜಲಾವೃತ್ತ

೧೬ ಮನೆಗಳಿಗೆ ಭಾಗಶಃ ಹಾನಿಯಾಗಿದ್ದು ಎರಡು ಮನೆಗಳಿಗೆ ಪೂರ್ಣ ಪ್ರಮಾಣದ ಹಾನಿಯಾಗಿದೆ

Admin