ಇಮಾಮ್ ಅವರಿಗೆ ಶನಿವಾರ ರೋಹಿತ್ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ
ಅಸ್ಮಿತೆ ವರದಿ, ನ.೧೩: ಇನ್ ಸ್ಟಿಟ್ಯೂಟ್ ಆಫ್ ಮೀಡಿಯಾ ಸ್ಟಡೀಸ್ ಆ್ಯಂಡ್ ರೀಸರ್ಚ್ ವತಿಯಿಂದ ಕೊಡಮಾಡುವ ಪ್ರಸಕ್ತ ಸಾಲಿನ ಬಿ. ಆರ್. ರೋಹಿತ್ ಪತ್ರಿಕೋದ್ಯಮ ಪ್ರಶಸ್ತಿಯನ್ನು ಪ್ರಜಾವಾಣಿ ಪತ್ರಿಕೆಯ ಬೆಳಗಾವಿ ವರದಿಗಾರ ಇಮಾಮ್ ಹುಸೇನ್ ಗೂಡುನವರ ನೀಡಲಾಗಿದ್ದು, ಬೆಳಗಾವಿಯಲ್ಲಿ ನವೆಂಬರ್ ೧೪, ಶನಿವಾರದಂದು ಜರಗುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುತ್ತಿದೆ.
ಶ್ರೀನಗರದಲ್ಲಿರುವ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದಲ್ಲಿ ಸಮಾರಂಭ ಆಯೋಜಿಸಲಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಉಪಸ್ಥಿತರಿರುವರು. ರೋಹಿತ್ ಅವರ ತಾಯಿ ತಂದೆ ಕೆ.ವಿ. ಲಲಿತಾ, ಸಿ. ರಾಜಣ್ಣ ಪ್ರಶಸ್ತಿ ಪ್ರದಾನ ಮಾಡುವರು.
ಇನ್ ಸ್ಟಿಟ್ಯೂಟ್ ಆಫ್ ಮೀಡಿಯಾ ಸ್ಟಡೀಸ್ ಆ್ಯಂಡ್ ರೀಸರ್ಚ್ ಅಧ್ಯಕ್ಷ ಪ್ರೊ. ಕೆ.ವಿ. ನಾಗರಾಜ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದು, ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಸಿ.ಎಂ. ತ್ಯಾಗರಾಜ್ ಅಧ್ಯಕ್ಷತೆ ವಹಿಸಲಿದ್ದಾರೆ.
***
ಈ ಲೇಖನ ಹಂಚಿಕೊಳ್ಳಿ