ಬ್ರೇಕಿಂಗ್
ಸಾಮರಸ್ಯ ಕೆಡಿಸುವ ಎಂಇಎಸ್‌, ಶಿವಸೇನೆ ನಿಷೇಧಕ್ಕೆ ಕರವೇ ಆಗ್ರಹ ಸುವರ್ಣ ಸೌಧದ ಎದುರು ಅಂತರಾಷ್ಟ್ರೀಯ ಯೋಗ‌ ದಿನಾಚರಣೆ ಸೈಬರ್ ವಂಚನೆಯಿಂದ ಹಣ ಕಳೆದುಹೋಗದಂತೆ ಪೊಲೀಸ್ ಇಲಾಖೆ ಆಧುನಿಕ ತಂತ್ರಜ್ಞಾನದ ಬಿಗಿಕ್ರಮ - ಪ್ರಿಯಾಂಕ ಖರ್ಗೆ ಕನ್ನಡಕ್ಕೆ ಮೊದಲ ಆದ್ಯತೆ ನೀಡಲು ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಬಿಳಿಮಲೆ ಆಗ್ರಹ ರಕ್ಷಣಾ ಭದ್ರತಾ ದಳಕ್ಕೆ (ಡಿಎಸ್‌ಸಿ) ಮಾಜಿ ಸೈನಿಕರ ನೇಮಕಾತಿ ಮಂಗಾವತಿ :   ಸೇವಾ ನಿವೃತ್ತ ಹಾಗೂ ಪ್ರತಿಭಾ ಸಾಧಕರಿಗೆ ಗೌರವ ಸನ್ಮಾನ 232 ಗ್ರೇಡ್-2 ತಹಶೀಲ್ದಾರ್‌ಗಳಿಗೆ ಗ್ರೇಡ್-1 ತಹಶೀಲ್ದಾರ್ ಹುದ್ದೆಗೆ ಬಡ್ತಿ ಮಹಾದಾಯಿ, ಕೃಷ್ಣೆ, ಕಾವೇರಿ ಜಲ ವಿವಾದ ನಿವಾರಣೆಗೆ ರಾಜ್ಯ ಸರ್ಕಾರದ ಹೆಚ್ಚಿನ ಮುತವರ್ಜಿ ಅಗತ್ಯ : ನ್ಯಾಯವಾದಿ ಮೋಹನ ಕಾತರಕಿ ಸಂವಿಧಾನ ಹಾಗೂ ಬಾಬಾಸಾಹೇಬರ ಸಿದ್ಧಂತಕ್ಕೆ ಅನುಸಾರ ರಾಜಕೀಯ ಮಾಡುತ್ತ ಬಂದಿದ್ದೇನೆ - ಮಾಜಿ ಸಚಿವ ಎಚ್.ಸಿ. ಮಹಾದೇವಪ್ಪ ಸ್ಪಷ್ಟನೆ ಅಭಿವೃದ್ಧಿಯ ಸ್ಪಷ್ಟವಾದ ಗುರಿಯೊಂದಿಗೆ ನರೇಂದ್ರ ಮೋದಿ ಸರ್ಕಾರ ಸಾಧನೆ : ಕೇಂದ್ರ ಸಚಿವ ಭೂಪತಿರಾಜ್ ಶ್ರೀನಿವಾಸ ವರ್ಮಾ ಸಾಮರಸ್ಯ ಕೆಡಿಸುವ ಎಂಇಎಸ್‌, ಶಿವಸೇನೆ ನಿಷೇಧಕ್ಕೆ ಕರವೇ ಆಗ್ರಹ ಸುವರ್ಣ ಸೌಧದ ಎದುರು ಅಂತರಾಷ್ಟ್ರೀಯ ಯೋಗ‌ ದಿನಾಚರಣೆ ಸೈಬರ್ ವಂಚನೆಯಿಂದ ಹಣ ಕಳೆದುಹೋಗದಂತೆ ಪೊಲೀಸ್ ಇಲಾಖೆ ಆಧುನಿಕ ತಂತ್ರಜ್ಞಾನದ ಬಿಗಿಕ್ರಮ - ಪ್ರಿಯಾಂಕ ಖರ್ಗೆ ಕನ್ನಡಕ್ಕೆ ಮೊದಲ ಆದ್ಯತೆ ನೀಡಲು ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಬಿಳಿಮಲೆ ಆಗ್ರಹ ರಕ್ಷಣಾ ಭದ್ರತಾ ದಳಕ್ಕೆ (ಡಿಎಸ್‌ಸಿ) ಮಾಜಿ ಸೈನಿಕರ ನೇಮಕಾತಿ ಮಂಗಾವತಿ :   ಸೇವಾ ನಿವೃತ್ತ ಹಾಗೂ ಪ್ರತಿಭಾ ಸಾಧಕರಿಗೆ ಗೌರವ ಸನ್ಮಾನ 232 ಗ್ರೇಡ್-2 ತಹಶೀಲ್ದಾರ್‌ಗಳಿಗೆ ಗ್ರೇಡ್-1 ತಹಶೀಲ್ದಾರ್ ಹುದ್ದೆಗೆ ಬಡ್ತಿ ಮಹಾದಾಯಿ, ಕೃಷ್ಣೆ, ಕಾವೇರಿ ಜಲ ವಿವಾದ ನಿವಾರಣೆಗೆ ರಾಜ್ಯ ಸರ್ಕಾರದ ಹೆಚ್ಚಿನ ಮುತವರ್ಜಿ ಅಗತ್ಯ : ನ್ಯಾಯವಾದಿ ಮೋಹನ ಕಾತರಕಿ ಸಂವಿಧಾನ ಹಾಗೂ ಬಾಬಾಸಾಹೇಬರ ಸಿದ್ಧಂತಕ್ಕೆ ಅನುಸಾರ ರಾಜಕೀಯ ಮಾಡುತ್ತ ಬಂದಿದ್ದೇನೆ - ಮಾಜಿ ಸಚಿವ ಎಚ್.ಸಿ. ಮಹಾದೇವಪ್ಪ ಸ್ಪಷ್ಟನೆ ಅಭಿವೃದ್ಧಿಯ ಸ್ಪಷ್ಟವಾದ ಗುರಿಯೊಂದಿಗೆ ನರೇಂದ್ರ ಮೋದಿ ಸರ್ಕಾರ ಸಾಧನೆ : ಕೇಂದ್ರ ಸಚಿವ ಭೂಪತಿರಾಜ್ ಶ್ರೀನಿವಾಸ ವರ್ಮಾ
21 ಜೂನ್ 2026
ಮತದಾರರ ಪಟ್ಟಿ ಪರಿಷ್ಕರಣೆ:  ರಾಜಕೀಯ ಪಕ್ಷ, ಸಾರ್ವಜನಿಕರ ಸಹಕಾರ ಅಗತ್ಯ: ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್
📄 ಬೆಳಗಾವಿ ಜಿಲ್ಲೆಯ ಸುದ್ದಿ
Dr. K N Doddmani · · 50 ವೀಕ್ಷಣೆಗಳು

ಮತದಾರರ ಪಟ್ಟಿ ಪರಿಷ್ಕರಣೆ:  ರಾಜಕೀಯ ಪಕ್ಷ, ಸಾರ್ವಜನಿಕರ ಸಹಕಾರ ಅಗತ್ಯ: ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್

ದೇಶದ ಮೂಲ‌ ನಿವಾಸಿಗಳು ಮತದಾನದಿಂದ ವಂಚಿತರಾಗಬಾರದು ಎನ್ನುವ ಉದ್ದೇಶದೊಂದಿಗೆ ಭಾರತ ಚುನಾವಣಾ ಆಯೋಗವು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಮತದಾರರ ಪಟ್ಟಿ ಸಮಗ್ರ ವಿಶೇಷ ಪರಿಷ್ಕರಣೆ ಯಶಸ್ವಿಗಾಗಿ ವಿವಿಧ ರಾಜಕೀಯ  ಪಕ್ಷಗಲಕು ಹಾಗೂ ಸಾರ್ವಜನಿಕರ ಸಹಕಾರ ಅತಗತ್ಯವಾಗಿದೆ.

ಮತದಾರರ ಪಟ್ಟಿ ಪರಿಷ್ಕರಣೆ:  ರಾಜಕೀಯ ಪಕ್ಷ, ಸಾರ್ವಜನಿಕರ ಸಹಕಾರ ಅಗತ್ಯ: ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್

ಬೆಳಗಾವಿ: ಜಿಲ್ಲೆಯಾದ್ಯಂತ ಜೂನ್ 30 ರಿಂದ ಅಕ್ಟೋಬರ್ 7 ರವರೆಗೆ ಜರುಗಲಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ  ಯಶಸ್ವಿಯಾಗಲು  ರಾಜಕೀಯ ಪಕ್ಷಗಳು, ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ ಎಂದು ಬೆಳಗಾವಿ ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್  ತಿಳಿಸಿದ್ದಾರೆ.

ಸುವರ್ಣ ವಿಧಾನಸೌಧ ಕಾನ್ಫರೆನ್ಸ್ ಸಭಾಂಗಣದಲ್ಲಿ ಇಂದು ಜರುಗಿದ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಮಾಧ್ಯಮ ಪ್ರತಿನಿಧಿಗಳೊಂದಗಿನ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಸಭೆ ನಡೆಸಿ ಅವರು ಮಾತನಾಡಿದರು.

ಪರಿಷ್ಕರಣೆ ಕಾರ್ಯದ ಪಾರದರ್ಶಕತೆ ಕಾಯ್ದುಕೊಳ್ಳುವುದು ಆದ್ಯತೆಯಾಗಿದ್ದು, ಅದರ ನಿರ್ವಹಣೆ ಮನದಟ್ಟ ಮಾಡಲು ಪ್ರಸ್ತುತ ಸಭೆ ಕರೆಯಲಾಗಿದೆ. ಜಿಲ್ಲೆಯ 18 ವಿಧಾನ ಸಭಾ ಕ್ಷೇತ್ರಗಳ ಮತದಾರರ ಪಟ್ಟಿಯನ್ನು ಮ್ಯಾಪಿಂಗ್ ಮಾಡಲಾಗಿದ್ದು, 41,22,869 ಮತದಾರರ ಪೈಕಿ 38,22,990 ಮತದಾರರ ಮ್ಯಾಪಿಂಗ್ ಕಾರ್ಯ ಪೂರ್ಣಗೊಂಡಿದ್ದು ಮ್ಯಾಪಿಂಗ್ ಕಾರ್ಯದಲ್ಲಿ ಜಿಲ್ಲೆಯಲ್ಲಿ ಪ್ರತಿಶತ 93 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ತಿಳಿಸಿದರು.

ಬೆಳಗಾವಿ ನಗರದ ದಕ್ಷಿಣ ಕ್ಷೇತ್ರದಲ್ಲಿ ಶೇಕಡಾ 84 ರಷ್ಟು ಹಾಗೂ ಉತ್ತರ ಕ್ಷೇತ್ರದಲ್ಲಿ ಶೇಕಡಾ 73 ರಷ್ಟು ಮ್ಯಾಪಿಂಗ್ ಮಾಡಲಾಗಿದೆ. ಉಳಿದಂತೆ ಕಾರ್ಯ ಪ್ರಗತಿಯಲ್ಲಿದೆ ಎಂದರು.

.

ಮ್ಯಾಪಿಂಗ್ ಆಗದೇ ಇರುವವರು ಮತದಾನದ ಹಕ್ಕಿನಿಂದ ವಂಚಿತರಾಗಬಾರದು ಎಂಬುದಕ್ಕೆ ತುಂಬಾ ಎಚ್ಚರಿಕೆ ವಹಿಸಲಾಗಿದ್ದು,  ಭೂತ ಮಟ್ಟದ ಅಧಿಕಾರಿಗಳು ಅಂಥವರ ಮನೆ ಮನೆಗೆ ಕನಿಷ್ಠ ಮೂರುಬಾರಿ ಭೆಟ್ಟಿ ನೀಡಿ,  ಎನ್ಯೂಮರೇಶನ್ ಅರ್ಜಿಗಳನ್ನು ನೀಡಿ ಸೂಕ್ತ ಮಾಹಿತಿ ಹಾಗೂ ಇತರೆ ಪುರಾವೆ ದಾಖಲೆಗಳೊಂದಿಗೆ ಸಂಗ್ರಹಿಸಲಾಗುವುದು. ಮತದಾರರು ತಮ್ಮ ವಿವರಗಳನ್ನು ಹಿಂದಿನ SIR ಮತದಾರರ ಪಟ್ಟಿಯ ಆಧಾರದ ಮೇಲೆ ಭರ್ತಿ ಮಾಡಿ ಅರ್ಜಿ ಜೊತೆಗೆ ಕೇಳಲಾದಂತಹ ಯಾವುದಾದರೊಂದು  ದಾಖಲೆಗಳನ್ನು ಲಗತ್ತಿಸಿ ಬಿ.ಎಲ್.ಓ‌ ಗಳಿಗೆ ನೀಡಬೇಕು.‌ ತದನಂತರ ಬಿ.ಎಲ್.ಓ ಗಳು ಅವುಗಳನ್ನು ಪರಿಶೀಲಿಸಿ ತಂತ್ರಾಂಶದಲ್ಲಿ ದಾಖಲಿಸಿರುತ್ತಾರೆ. ಅಗತ್ಯ ದಾಖಲೆಗಳಿಲ್ಲದೆ ಮತದಾರರ ಪಟ್ಟಿಯಲ್ಲಿನ ಹೆಸರುಗಳನ್ನು ತೆಗೆದು ಹಾಕಲು  ಅವಕಾಶ ವಿರುವುದಿಲ್ಲ. ಮತದಾರರ ಪಟ್ಟಿಯಲ್ಲಿ ಹೊಸದಾಗಿ ಸೇರ್ಪಡೆ ಹೊಂದಲು ನಮೂನೆ 6 ನ್ನು ಸಲ್ಲಿಸಬೇಕು ಎಂದರು.

ದೇಶದ ಮೂಲ‌ ನಿವಾಸಿಗಳು ಮತದಾನದಿಂದ ವಂಚಿತರಾಗಬಾರದು ಎನ್ನುವ ಉದ್ದೇಶದೊಂದಿಗೆ ಭಾರತ ಚುನಾವಣಾ ಆಯೋಗವು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಮತದಾರರ ಪಟ್ಟಿ ಸಮಗ್ರ ವಿಶೇಷ ಪರಿಷ್ಕರಣೆ ಯಶಸ್ವಿಗಾಗಿ ವಿವಿಧ ರಾಜಕೀಯ  ಪಕ್ಷಗಲಕು ಹಾಗೂ ಸಾರ್ವಜನಿಕರ ಸಹಕಾರ ಅತಗತ್ಯವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಮೊಹಮ್ಮದ್ ರೋಷನ್ ಅವರು ಹೇಳಿದರು.

ತದನಂತರ ವಿವಿಧ ರಾಜಕೀಯ ಮುಖಂಡರುಗಳು ಹಾಗೂ ಮಾಧ್ಯಮ ಪ್ರತಿನಿಧಿಗಳೊಂದಿಗೆ ಜರುಗಿದ ಸಂವಾದದಲ್ಲಿ ಜಿಲ್ಲಾಧಿಕಾರಿಗಳಾದ‌ ಮೊಹಮ್ಮದ್ ರೋಷನ್ ಅವರು ಸವಿವರವಾದ ಮಾಹಿತಿಯನ್ನು ನೀಡಿದರು.

ಕಾರ್ಯಾಗಾರದಲ್ಲಿ ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಪ್ರಶಿಕ್ಷಣಾರ್ಥಿ ಆಯ್.ಎ.ಎಸ್.  ಅಧಿಕಾರಿ ರೋಹಿತ ಸಿಂಗ್, ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಜರಿದ್ದರು.

**

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

ಸಾಮರಸ್ಯ ಕೆಡಿಸುವ ಎಂಇಎಸ್‌, ಶಿವಸೇನೆ ನಿಷೇಧಕ್ಕೆ ಕರವೇ ಆಗ್ರಹ ಬೆಳಗಾವಿ ಜಿಲ್ಲೆಯ ಸುದ್ದಿ

ಸಾಮರಸ್ಯ ಕೆಡಿಸುವ ಎಂಇಎಸ್‌, ಶಿವಸೇನೆ ನಿಷೇಧಕ್ಕೆ ಕರವೇ ಆಗ್ರಹ

ಸಂಘಟನೆಗಳು ಮೇಲಿಂದ ಮೇಲೆ ಕನ್ನಡ ವಿರೋಧಿ ಹುನ್ನಾರಗಳನ್ನು ನಡೆಸುತ್ತಲೇ ಬಂದಿವೆ. ಆ ಮೂಲಕ  ಮುಗ್ಧ ಮರಾಠಿ ಬಾಂಧವರನ್ನು ದಾರಿ ತಪ್ಪಿಸಿ  ಉತ್ತಮ ಬಾಂಧವ್ಯ ಹಾಳುಗೆಡುವುತ್ತಿದ್ದಾರೆ.  ನಾಳೆ ನಡೆಲು ಉದ್ದೇಶಿರುವ ಹೋರಾಟಕ್ಕೆ ಜಿಲ್ಲಾ ಅಡಳಿತ ಮತ್ತು ಪೊಲೀಸ್‌ ಇಲಾಖೆ ಅವಕಾಶ ನೀಡಬಾರದು. ಒಂದು ವೇಳೆ ಅವಕಾಶ ಕೊಟ್ಟಿದ್ದಾರೆ ಪ್ರತಿಯಾಗಿ ಕರವೇ ಸ್ವಾಭಿಮಾನ ರ್ಯಾಲಿ ನಡೆಸುವುದು ಎಂದು ಎಚ್ಚರಿಕೆ ನೀಡಲಾಗಿದೆ

Admin
MLIRC ಸೈನಿಕರು ‌ಸಾರ್ವಜನಿಕರು ಸೇರಿ ಬೃಹತ್ ಯೋಗ ಪ್ರದರ್ಶನ ಬೆಳಗಾವಿ ಜಿಲ್ಲೆಯ ಸುದ್ದಿ

MLIRC ಸೈನಿಕರು ‌ಸಾರ್ವಜನಿಕರು ಸೇರಿ ಬೃಹತ್ ಯೋಗ ಪ್ರದರ್ಶನ

ಮಿಲಿಟರಿ ಮತ್ತು ನಾಗರಿಕ ಸಮುದಾಯದೊಳಗೆ ಆರೋಗ್ಯ, ಫಿಟ್‌ನೆಸ್ ಮತ್ತು ಸಾಮರಸ್ಯವನ್ನು ಉತ್ತೇಜಿಸುವ ಕಡೆಗೆ MARATHA ಲೈಟ್ ಇನ್‌ಫೆಂಟ್ರಿ ರೆಜಿಮೆಂಟಲ್ ಸೆಂಟರ್‌ನ ಬದ್ಧತೆಗೆ ನಿದರ್ಶನವಾದ ಶಿಬಿರ, ಸೈನಿಕರು ಮತ್ತು ನಾಗರಿಕರನ್ನು ಸಾಮಾನ್ಯ ವೇದಿಕೆಯಲ್ಲಿ ಒಟ್ಟುಗೂಡಿಸುವ ಮೂಲಕ ಸಶಸ್ತ್ರ ಪಡೆಗಳು ಮತ್ತು ಸಮಾಜದ ನಡುವಿನ ಬಾಂಧವ್ಯವನ್ನು ಬಲಪಡಿಸಿತು.

Admin