ಬ್ರೇಕಿಂಗ್
◆"ಪತ್ರಕರ್ತ ಜವಾಬ್ದಾರಿಯಿಂದ ನುಣಚಿಕೊಂಡರೆ ಸತ್ಯ ಸಾಯುತ್ತದೆ" ◆ಇಮಾಮ್ ಅವರಿಗೆ ಶನಿವಾರ ರೋಹಿತ್ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ◆ಸಕ್ಕರೆ ಮಾರಾಟದ ಲಾಭ ಹಂಚಿಕೆ ಸೂತ್ರ- ಇತಿಹಾಸದಲ್ಲಿ ಮೊದಲು ಜಾರಿ ◆ಕನ್ನಡ ಮನಸ್ಸುಗಳನ್ನು ಒಂದುಗೂಡಿಸುವ ಕಸಾಪ ಕಳೆದುಕೊಂಡರೆ ಮತ್ತೊಂದನ್ನು ಕಟ್ಟಲು ಸಾಧ್ಯವಿಲ್ಲ : ಜಾಣಗೆರೆ ವೆಂಕಟರಾಮಯ್ಯ ◆ಟನ್ ಕಬ್ಬಿಗೆ 3,600 ಕಾರ್ಖಾನೆಗಳ ನಿಗದಿಗೆ ನಿಟ್ಟುಸಿರು ಬಿಟ್ಟ ರೈತರು ಹೋರಾಟದ ಬಿಸಿ ಉಸಿರು ◆ಬೆಳಗಾವಿ ಪಾಲಿಕೆಯಿಂದ ಪತ್ರಕರ್ತರಿಗೆ ಆರೋಗ್ಯ ವಿಮಾ ಕಾರ್ಡ್ ವಿತರಣೆ ◆ಕನ್ನಡ – ಮರಾಠಿ ಸಾಂಸ್ಕೃತಿಕ ಅನುಸಂಧಾನಕಾರ ಡಿ.ಎಸ್. ಚೌಗಲೆ ◆ಗಣಿ ಇಲಾಖೆ ಸಿಬ್ಬಂದಿಗೆ ಅನಧಿಕೃತ ಹಣದ ವಹಿವಾಟು- ಉಪ ಲೋಕಾಯುಕ್ತ ಬಿ. ವೀರಪ್ಪ ◆ಮರು ನೋಂದಣಿ ಮಾಡದ ಶಾಲಾ ವಾಹನ, ಅನಧಿಕೃತ ವಾಹನಗಳ ಮುಲಾಜಿಲ್ಲದೆ ಜಪ್ತಿ ಮಾಡಿ- ಉಪ ಲೋಕಾಯುಕ್ತರ ಕಡಕ್ ಸೂಚನೆ ◆ಮುಚ್ಚಂಡಿ ಗ್ರಾಮ ಪಂಚಾಯತಿ: ಕರ್ತವ್ಯ ಲೋಪ, ಅನುದಾನ ದುರ್ಬಳಕೆ - ಮುಲಾಜಿಲ್ಲದೆ ಕ್ರಮ - ಉಪ ಲೋಕಾಯುಕ್ತರ ಎಚ್ಚರಿಕೆ ◆"ಪತ್ರಕರ್ತ ಜವಾಬ್ದಾರಿಯಿಂದ ನುಣಚಿಕೊಂಡರೆ ಸತ್ಯ ಸಾಯುತ್ತದೆ" ◆ಇಮಾಮ್ ಅವರಿಗೆ ಶನಿವಾರ ರೋಹಿತ್ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ◆ಸಕ್ಕರೆ ಮಾರಾಟದ ಲಾಭ ಹಂಚಿಕೆ ಸೂತ್ರ- ಇತಿಹಾಸದಲ್ಲಿ ಮೊದಲು ಜಾರಿ ◆ಕನ್ನಡ ಮನಸ್ಸುಗಳನ್ನು ಒಂದುಗೂಡಿಸುವ ಕಸಾಪ ಕಳೆದುಕೊಂಡರೆ ಮತ್ತೊಂದನ್ನು ಕಟ್ಟಲು ಸಾಧ್ಯವಿಲ್ಲ : ಜಾಣಗೆರೆ ವೆಂಕಟರಾಮಯ್ಯ ◆ಟನ್ ಕಬ್ಬಿಗೆ 3,600 ಕಾರ್ಖಾನೆಗಳ ನಿಗದಿಗೆ ನಿಟ್ಟುಸಿರು ಬಿಟ್ಟ ರೈತರು ಹೋರಾಟದ ಬಿಸಿ ಉಸಿರು ◆ಬೆಳಗಾವಿ ಪಾಲಿಕೆಯಿಂದ ಪತ್ರಕರ್ತರಿಗೆ ಆರೋಗ್ಯ ವಿಮಾ ಕಾರ್ಡ್ ವಿತರಣೆ ◆ಕನ್ನಡ – ಮರಾಠಿ ಸಾಂಸ್ಕೃತಿಕ ಅನುಸಂಧಾನಕಾರ ಡಿ.ಎಸ್. ಚೌಗಲೆ ◆ಗಣಿ ಇಲಾಖೆ ಸಿಬ್ಬಂದಿಗೆ ಅನಧಿಕೃತ ಹಣದ ವಹಿವಾಟು- ಉಪ ಲೋಕಾಯುಕ್ತ ಬಿ. ವೀರಪ್ಪ ◆ಮರು ನೋಂದಣಿ ಮಾಡದ ಶಾಲಾ ವಾಹನ, ಅನಧಿಕೃತ ವಾಹನಗಳ ಮುಲಾಜಿಲ್ಲದೆ ಜಪ್ತಿ ಮಾಡಿ- ಉಪ ಲೋಕಾಯುಕ್ತರ ಕಡಕ್ ಸೂಚನೆ ◆ಮುಚ್ಚಂಡಿ ಗ್ರಾಮ ಪಂಚಾಯತಿ: ಕರ್ತವ್ಯ ಲೋಪ, ಅನುದಾನ ದುರ್ಬಳಕೆ - ಮುಲಾಜಿಲ್ಲದೆ ಕ್ರಮ - ಉಪ ಲೋಕಾಯುಕ್ತರ ಎಚ್ಚರಿಕೆ
18 ನವೆಂ 2026
ಮರು ನೋಂದಣಿ ಮಾಡದ ಶಾಲಾ ವಾಹನ, ಅನಧಿಕೃತ ವಾಹನಗಳ ಮುಲಾಜಿಲ್ಲದೆ ಜಪ್ತಿ ಮಾಡಿ- ಉಪ ಲೋಕಾಯುಕ್ತರ ಕಡಕ್ ಸೂಚನೆ
📄 ಬೆಳಗಾವಿ ಜಿಲ್ಲೆಯ ಸುದ್ದಿ
Dr. K N Doddmani · · 55 ವೀಕ್ಷಣೆಗಳು

ಮರು ನೋಂದಣಿ ಮಾಡದ ಶಾಲಾ ವಾಹನ, ಅನಧಿಕೃತ ವಾಹನಗಳ ಮುಲಾಜಿಲ್ಲದೆ ಜಪ್ತಿ ಮಾಡಿ- ಉಪ ಲೋಕಾಯುಕ್ತರ ಕಡಕ್ ಸೂಚನೆ

ಸಾರಿಗೆ ಇಲಾಖೆಯ ಕಚೇರಿಯಲ್ಲಿ ಏಜೆಂಟರ ಹಾವಳಿ ಕಂಡುಬಂದರೆ ಅಧಿಕಾರಿಗಳ ವಿರುದ್ಧ ಕ್ರಮ: ಉಪ ಲೋಕಾಯುಕ್ತ ಬಿ. ವೀರಪ್ಪ ಎಚ್ಚರಿಕೆ

ಮರು ನೋಂದಣಿ ಮಾಡದ ಶಾಲಾ ವಾಹನ, ಅನಧಿಕೃತ ವಾಹನಗಳ ಮುಲಾಜಿಲ್ಲದೆ ಜಪ್ತಿ ಮಾಡಿ- ಉಪ ಲೋಕಾಯುಕ್ತರ ಕಡಕ್ ಸೂಚನೆ

ಅಸ್ಮಿತೆ ವರದಿ, ಅ.೩೧:

ರಾಜ್ಯ ಲೋಕಾಯುಕ್ತದ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಇಂದು ಬೆಳಗಾವಿಯ ಶಿವಾಜಿ ನಗರದ ಪ್ರಾದೇಶಿಕ ಸಾರಿಗೆ ಇಲಾಖೆ (ಆರ್‌ಟಿಒ) ಕಚೇರಿಗೆ ದಿಢೀರ್ ಭೇಟಿ ನೀಡಿ, ಕಚೇರಿಯ ಕಾರ್ಯನಿರ್ವಹಣೆ, ಸಿಬ್ಬಂದಿಗಳ ಹಾಜರಾತಿ, ವಾಹನಗಳ ನೋಂದಣಿ, ವಾಣಿಜ್ಯ ವಾಹನಗಳ ಪರವಾನಗಿ ಸೇರಿದಂತೆ ವಿವಿಧ ವಿಷಯಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮರುನೋಂದಣಿ ಮಾಡಿಸದ ಶಾಲಾ ವಾಹನಗಳನ್ನು ಕೂಡಲೇ ಜಪ್ತಿ ಮಾಡಬೇಕು. ಜಿಲ್ಲೆಯಲ್ಲಿ ಅನಧಿಕೃತ ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸುತ್ತಿರುವುದು ಕಂಡುಬಂದಿದ್ದು, ಅಂತಹ ವಾಹನಗಳನ್ನು ಪತ್ತೆಹಚ್ಚಿ ಯಾವುದೇ ಮುಲಾಜಿಲ್ಲದೆ ಜಪ್ತಿ ಮಾಡಬೇಕು. ಸಾರ್ವಜನಿಕರ ಸುರಕ್ಷತೆ ಹಾಗೂ ಸಾರಿಗೆ ನಿಯಮಗಳ ಪಾಲನೆಗೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಕಚೇರಿ ಆವರಣದಲ್ಲಿ ವಾಹನ ಚಾಲನಾ ಪರವಾನಗಿ ಹಾಗೂ ವಾಹನ ನೋಂದಣಿ ಸೇರಿದಂತೆ ವಿವಿಧ ಕೆಲಸಗಳಿಗಾಗಿ ಏಜೆಂಟರು ಕಂಡುಬಂದರೆ ಸಂಬಂಧಪಟ್ಟ ಸಾರಿಗೆ ಅಧಿಕಾರಿಗಳ ವಿರುದ್ಧ ನೇರವಾಗಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಿನನಿತ್ಯದ ಬಳಕೆಗಾಗಿ ನೋಂದಾಯಿಸಿಕೊಂಡಿರುವ ವಾಹನಗಳನ್ನು ನಿಯಮಾನುಸಾರ ಮರುನೋಂದಣಿ ಮಾಡಿಸಿಕೊಳ್ಳದಿರುವುದು ಕಂಡುಬಂದಿದೆ. ಇಂತಹ ವಾಹನಗಳ ವಿರುದ್ಧ ಈವರೆಗೆ ಸಾರಿಗೆ ಇಲಾಖೆ ಯಾವುದೇ ಕ್ರಮ ಕೈಗೊಳ್ಳದಿರುವುದು ಗಂಭೀರ ವಿಚಾರವಾಗಿದೆ. ಆದ್ದರಿಂದ, ಕೂಡಲೇ ಸಾರಿಗೆ ಕಾಯ್ದೆಯಡಿ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ಸಂಬಂಧಪಟ್ಟ ಸಾರಿಗೆ ಇಲಾಖೆಯ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಿದರು.

****

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

"ಪತ್ರಕರ್ತ ಜವಾಬ್ದಾರಿಯಿಂದ ನುಣಚಿಕೊಂಡರೆ ಸತ್ಯ ಸಾಯುತ್ತದೆ" ಬೆಳಗಾವಿ ಜಿಲ್ಲೆಯ ಸುದ್ದಿ

"ಪತ್ರಕರ್ತ ಜವಾಬ್ದಾರಿಯಿಂದ ನುಣಚಿಕೊಂಡರೆ ಸತ್ಯ ಸಾಯುತ್ತದೆ"

‘ಪತ್ರಕರ್ತರೂ ಭ್ರಷ್ಟರಾಗಿದ್ದಾರೆ, ದುಡ್ಡು ತೆಗೆದುಕೊಂಡು ಬರೆಯುತ್ತಾರೆ ಎಂದು ಜನ ಮಾತನಾಡಿಕೊಳ್ಳುವುದು ಸಹಜವಾಗಿದೆ. ಆದರೆ, ಏನೂ ಪಡೆಯದೇ ಬರೆಯುವ ಪತ್ರಕರ್ತರೂ ನಮ್ಮ ನಡುವೆ ಇದ್ದಾರೆ. ಅವರಿಂದು ಏಕಾಂಗಿ ಆಗುತ್ತಿದ್ದಾರೆ. ಭವಿಷ್ಯದ ದೃಷ್ಟಿಯಲ್ಲಿ ಇದು ಒಳ್ಳೆಯ ಬೆಳವಣಿಗೆಯಲ್ಲ’ - ಎಚ್‌.ಆರ್‌. ಶ್ರೀಶ

Admin
ಬೆಳಗಾವಿ ಪಾಲಿಕೆಯಿಂದ ಪತ್ರಕರ್ತರಿಗೆ ಆರೋಗ್ಯ ವಿಮಾ ಕಾರ್ಡ್ ವಿತರಣೆ ಬೆಳಗಾವಿ ಜಿಲ್ಲೆಯ ಸುದ್ದಿ

ಬೆಳಗಾವಿ ಪಾಲಿಕೆಯಿಂದ ಪತ್ರಕರ್ತರಿಗೆ ಆರೋಗ್ಯ ವಿಮಾ ಕಾರ್ಡ್ ವಿತರಣೆ

"ಪತ್ರಕರ್ತರು ಸದಾ ಆರೋಗ್ಯದಿಂದ ಇರಬೇಕೆಂದು ಹಾರೈಸುತ್ತೇವೆ. ಅನಿವಾರ್ಯ ಕಾರಣಗಳು ತುರ್ತು ಆರೋಗ್ಯ ಸಮಸ್ಯೆಗಳು ಬಂದಾಗ ಮಾತ್ರ ವಿಮೆ ಕಾರ್ಡ್ ಉಪಯೋಗವಾಗಲಿ. ಪಾಲಿಕೆಯ ಈ ಸೌಲಭ್ಯ ಸದುಪಯೋಗವಾಗಲಿ"

Admin