ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ಗೊತ್ತುವಳಿ ಅಂಗೀಕಾರಕ್ಕೆ ಕಾನೂನು ತೊಡಕಿಲ್ಲ, ಸ್ವೀಕಾರ ಅವಶ್ಯಕ : ನ್ಯಾಯಮೂರ್ತಿ ನಾಗಮೋಹನದಾಸ್ ಸರ್ಕಾರಕ್ಕೆ ಪತ್ರ
📄 ಕರ್ನಾಟಕ ಸುದ್ದಿ
Dr. K N Doddmani · · 113 ವೀಕ್ಷಣೆಗಳು

ಗೊತ್ತುವಳಿ ಅಂಗೀಕಾರಕ್ಕೆ ಕಾನೂನು ತೊಡಕಿಲ್ಲ, ಸ್ವೀಕಾರ ಅವಶ್ಯಕ : ನ್ಯಾಯಮೂರ್ತಿ ನಾಗಮೋಹನದಾಸ್ ಸರ್ಕಾರಕ್ಕೆ ಪತ್ರ

ಸರ್ಕಾರದ ಮುಖ್ಯ ಕಾರ್ಯದರ್ಶಿ ಶ್ರೀಮತಿ ಶಾಲಿನಿ ರಜನೀಶ ಅವರಿಗೆ ನಿನ್ನೆ ದಿ.17 ರಂದು ಪತ್ರ ಬರೆದಿರುವ ಅವರು, ಗೊತ್ತುವಳಿ ಅಂಗೀಕಾರಕ್ಕೆ ಯಾವುದೇ ರೀತಿಯ ಕಾನೂನು ತೊಡಕಿಲ್ಲದಾಗಿದ್ದು, ಈ ಸಂಬಂಧ ಸೂಕ್ತ  ಕ್ರಮ ಕೈಗೊಳ್ಳಬೇಕೆಂದ ಸಲಹೆ ನೀಡಿದ್ದಾರೆ. 

ಅಸ್ಮಿತೆ ವರದಿ, ಜು.18: "ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ" ಹಾಗೂ "ಗಡಿವಿವಾದ ಪರಿಹಾರಕ್ಕೆ ಮಹಾಜನ ಆಯೋಗದ ವರದಿಯೇ ಅಂತಿಮ" ಎಂಬ ಗೊತ್ತುವಳಿ ಅಂಗೀಕರಿಸುವುದು ಅನಿವಾರ್ಯ ಮತ್ತು ಅವಶ್ಯಕವಾಗಿದೆ  ಆಗಿದೆ ಎಂದು  ಕರ್ನಾಟಕ ಗಡಿ ಹಾಗೂ ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷರೂ ಆದ ನಿವೃತ್ತ ನ್ಯಾಯಮೂರ್ತಿ ನಾಗಮೋಹನ ದಾಸ್ ಅವರು ಸರ್ಕಾರಕ್ಕೆ ಪತ್ರ ಬರೆದು ಮನವರಿಕೆ ಮಾಡಿದ್ದಾರೆ.

ಸರ್ಕಾರದ ಮುಖ್ಯ ಕಾರ್ಯದರ್ಶಿ ಶ್ರೀಮತಿ ಶಾಲಿನಿ ರಜನೀಶ ಅವರಿಗೆ ನಿನ್ನೆ ದಿ.17 ರಂದು ಪತ್ರ ಬರೆದಿರುವ ಅವರು, ಗೊತ್ತುವಳಿ ಅಂಗೀಕಾರಕ್ಕೆ ಯಾವುದೇ ರೀತಿಯ ಕಾನೂನು ತೊಡಕಿಲ್ಲದಾಗಿದ್ದು, ಈ ಸಂಬಂಧ ಸೂಕ್ತ  ಕ್ರಮ ಕೈಗೊಳ್ಳಬೇಕೆಂದ ಸಲಹೆ ನೀಡಿದ್ದಾರೆ.

ನ್ಯಾಯಮೂರ್ತಿ ನಾಗಮೋಹನದಾಸ್ ಅವರು ಸರ್ಕಾರಕ್ಕೆ ಬರೆದ ಪತ್ರದ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಕನ್ನಡಪರ ಹಿರಿಯ ಹೋರಾಟಗಾರ ಅಶೋಕ ಚಂದರಗಿ ಅವರು, "ಪಾಲಿಕೆಯಲ್ಲಿ ಗೊತ್ತುವಳಿ ಸ್ವೀಕಾರ ಕುರಿತು ರಾಜ್ಯ ಸರಕಾರ ಪಾಲಿಕೆಗೆ ತನ್ನ ಅಭಿಪ್ರಾಯ ತಿಳಿಸಿಬೇಕಾದ ಸಂದರ್ಭದಲ್ಲಿ  ಹಿರಿಯ ಅಧಿಕಾರಿಗಳು ಕಡತವನ್ನು ಅತ್ತಿಂದಿತ್ತ ಎಳೆದಾಡುತ್ತಿರುವ ಮಧ್ಯ  ಆಯೋಗದ ಮೂಲಕ ಆಯೋಗದ ಅಧ್ಯಕ್ಷರು ನೀಡಿರುವ  ಅಭಿಪ್ರಾಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕಾಗುತ್ತದೆ" ಎಂದು ತಿಳಿಸಿದ್ದಾರೆ.

ಗಡಿವಿವಾದ ಪ್ರಕರಣವು 2004 ರಲ್ಲಿ ಸುಪ್ರೀಂ ಕೋರ್ಟಿನಲ್ಲಿ ದಾಖಲಾದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಗಡಿ ಕಾನೂನು ಸಲಹಾ ಸಮಿತಿಯನ್ನು ರಚಿಸಿತ್ತು.2015 ರಲ್ಲಿ  ಸಲಹಾ ಸಮಿತಿಯು ಗಡಿ ಸಂರಕ್ಷಣಾ ಆಯೋಗವಾಗಿ ಬದಲಾಯಿತು. 2018 ರಲ್ಲಿ ಕುಮಾರಸ್ವಾಮಿ ಸರಕಾರವು ಗಡಿಯ ಜೊತೆಗೆ ನದಿಗಳ ರಕ್ಷಣೆಯ ಹೊಣೆಯನ್ನು ಆಯೋಗಕ್ಕೆ ನೀಡಿತು. ಈಗ ಆಯೋಗವು ನೀಡುವ ಸಲಹೆ,ಸೂಚನೆಗಳನ್ನು ರಾಜ್ಯ ಸರಕಾರ ಗಂಭೀರವಾಗಿ  ಪಾಲಿಸಲೇಬೇಕಾಗುತ್ತದೆ ಎಂದಿದ್ದಾರೆ.

ಪಾಲಿಕೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿ ಅಂಗೀಕರಿಸಬೇಕೆಂದು ಆಗ್ರಹಿಸಿ 22 ಕ್ಕೂ ಅಧಿಕ ಕನ್ನಡ ಸಂಘಟನೆಗಳು ಕಳೆದ ಮಾರ್ಚ 26 ರಿಂದ ನಡೆಸಿರುವ ಹೋರಾಟದ ಬಗ್ಗೆ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯು ಜುಲೈ 13 ರಂದು ಆಯೋಗಕ್ಕೆ ಪತ್ರ ಬರೆದು ಗಮನ ಸೆಳೆದಿತ್ತು ಎಂದು ಅಶೋಕ ಚಂದರಗಿ ತಿಳಿಸಿದ್ದಾರೆ.

***

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

'ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ, 2026'ಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ಕರ್ನಾಟಕ ಸುದ್ದಿ

'ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ, 2026'ಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ

ಇದು ಯಾವುದೋ ಒಂದು ನಿರ್ದಿಷ್ಟ ಸಂಸ್ಥೆ, ಸಂಘ, ಸಂಘಟನೆ, ಸೊಸೈಟಿ, ಕ್ಲಬ್, ಒಕ್ಕೂಟ, ಸಿಂಡಿಕೇಟ್ ಅಥವಾ ಎನ್‌ಜಿಒವನ್ನು ನಿರ್ಬಂಧಿಸಲು ಅಥವಾ ಮಟ್ಟಹಾಕಲು ಎಂದು ಎಲ್ಲರೂ ಯಾಕೆ ಭಾವಿಸುತ್ತಿದ್ದಾರೋ? ಇದು ಯಕ್ಷ ಪ್ರಶ್ನೆ!

Admin