ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ಸಕಾಲಕ್ಕೆ  ಮಾಹಿತಿ‌ ಒದಗಿಸದ ತಹಶೀಲ್ದಾರ ಸೇರಿ ಮೂವರಿಗೆ ತಲಾ 10 ಸಾವಿರ ದಂಡ
📄 ಕರ್ನಾಟಕ ಸುದ್ದಿ
Dr. K N Doddmani · · 110 ವೀಕ್ಷಣೆಗಳು

ಸಕಾಲಕ್ಕೆ ಮಾಹಿತಿ‌ ಒದಗಿಸದ ತಹಶೀಲ್ದಾರ ಸೇರಿ ಮೂವರಿಗೆ ತಲಾ 10 ಸಾವಿರ ದಂಡ

ಅಸ್ಮಿತೆ ವರದಿ, ಜು.28: ಮಾಹಿತಿ ಹಕ್ಕು ಕಾಯ್ದೆ ಅಡಿ ಮಾಹಿತಿ ಅಪೇಕ್ಷಿಸಿದ ಅರ್ಜಿದಾರನಿಗೆ ಸಕಾಲಕ್ಕೆ ಮಾಹಿತಿ‌ ಒದಗಿಸದ ಹುಬ್ಬಳ್ಳಿ ತಾಲ್ಲೂಕಿನ ತಹಶೀಲ್ದಾರ ಸೇರಿ, ಸಿಂದಗಿ ಪುರಸಭೆ ಮಾಹಿತಿ ಅಧಿಕಾರಿ ಮತ್ತು ಗಜೇಂದ್ರಗಡ ತಾಲ್ಲೂಕು ಇಟಿಗಿ ಗ್ರಾಮ ಪಂಚಾಯತಿ ಕಾರ್ಯದರ್ಶಿಗೆ ತಲಾ 10 ಸಾವಿರ ದಂಡ ವಿಧಿಸಿ ಕರ್ನಾಟಕ ಮಾಹಿತಿ ಆಯೋಗ ಬೆಳಗಾವಿ ಪೀಠದ ಮಾಹಿತಿ ಆಯುಕ್ತರು ಆದೇಶಿಸಿದ್ದಾರೆ.

ಈ ಮೂವರು ಅಧಿಕಾರಿಗಳು ಸಕಾಲದಲ್ಲಿ ಮಾಹಿತಿ ಒದಗಿಸದ ಕಾರಣ ಅರ್ಜಿದಾರ ಕರ್ನಾಟಕ ಮಾಹಿತಿ ಆಯೋಗ ಬೆಳಗಾವಿ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ಪೀಠ ತಹಶೀಲ್ದಾರ ಸೇರಿ ಮೂವರು ಮಾಹಿತಿ ಹಕ್ಕು ಕಾಯ್ದೆ ಉಲ್ಲಂಘನೆ ಮಾಡಿರುವುದು ಸಾಬೀತಾಗಿರುವುದರಿಂದ ತಲಾ 10 ಸಾವಿರ ದಂಡ ವಿಧಿಸಿ ಶಿಸ್ತು ಕ್ರಮ ತೆಗೆದುಕೊಳ್ಳಲಾಗಿದೆ.

ಮೇಲ್ಮನವಿ ಸಲ್ಲಿಸಿದ ಅರ್ಜಿದಾರ ಅನುಭವಿಸಿದ ಕಷ್ಟ ಮತ್ತು ಇತರೆ ವೆಚ್ಚಗಳಿಗಾಗಿ 5 ಸಾವಿರ ಪರಿಹಾರವನ್ನೂ ನೀಡುವಂತೆ ಹುಬ್ಬಳ್ಳಿ ತಾಲ್ಲೂಕು ನವನಗರ ಹೆಸ್ಕಾಂ ಕಚೇರಿಯ ಸಾರ್ವಜನಿಕ ಮಾಹಿತಿ ಅಧಿಕಾರಿಯೂ ಆಗಿರುವ ಹಣಕಾಸು ನಿಗಮದ ಉಪಲೆಕ್ಕ ನಿಯಂತ್ರಣಾಧಿಕಾರಿಗೆ ಆದೇಶಿಸಲಾಗಿದೆ.

ನಿಗದಿತ ಕಾಲಮಿತಿಯಲ್ಲಿ ಸೂಕ್ತ ಮಾಹಿತಿ ಒದಗಿಸದೇ ಇಂಥ ಪ್ರಕರಣ ಮರುಕಳಿಸಿದರೆ ಶಿಸ್ತು ಕ್ರಮ‌ ತೆಗೆದುಕೊಳ್ಳಲಾಗುವುದೆಂದು ಮಾಹಿತಿ ಆಯುಕ್ತ ಪ್ರಕಾಶ ನಾರಾಯಣ ಚನ್ನಾಳ ಎಚ್ಚರಿಕೆ ‌ನೀಡಿದ್ದಾರೆ

**

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

'ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ, 2026'ಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ಕರ್ನಾಟಕ ಸುದ್ದಿ

'ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ, 2026'ಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ

ಇದು ಯಾವುದೋ ಒಂದು ನಿರ್ದಿಷ್ಟ ಸಂಸ್ಥೆ, ಸಂಘ, ಸಂಘಟನೆ, ಸೊಸೈಟಿ, ಕ್ಲಬ್, ಒಕ್ಕೂಟ, ಸಿಂಡಿಕೇಟ್ ಅಥವಾ ಎನ್‌ಜಿಒವನ್ನು ನಿರ್ಬಂಧಿಸಲು ಅಥವಾ ಮಟ್ಟಹಾಕಲು ಎಂದು ಎಲ್ಲರೂ ಯಾಕೆ ಭಾವಿಸುತ್ತಿದ್ದಾರೋ? ಇದು ಯಕ್ಷ ಪ್ರಶ್ನೆ!

Admin