ಬ್ರೇಕಿಂಗ್
ನಾಡಗೀತೆಯಲ್ಲಿ ಬೌದ್ಧ ಧರ್ಮದ ಹೆಸರು ಸೇರಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸರ್ಕಾರಕ್ಕೆ ಮನವಿ ಹಕ್ಕಿ-ಪಿಕ್ಕಿ ಸಮುದಾಯದ ಮೂಲಭೂತ ಸಮಸ್ಯೆಗಳ ಶಾಶ್ವತ ಪರಿಹಾರಕ್ಕಾಗಿ ಸರ್ಕಾರ ಮಟ್ಟದಲ್ಲಿ ಕ್ರಮ - ಸಿಇಓ ಬೆಳಗಾವಿ ಪಾಲಿಕೆಗೆ ಅನುದಾನ ಬಿಡುಗಡೆ ಮಾಡದಂತೆ ಗಡಿ ಕನ್ನಡ ಸೇನೆ ಆಗ್ರಹ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯ ಘೋಷಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅನ್ಯರಿಗೆ ಶಾಶ್ವತ ನಿವಾಸ ಪ್ರಮಾಣಪತ್ರ ನೀಡುವುದು ಸಾಂವಿಧಾನಿಕ ಚೌಕಟ್ಟಿಗೆ ವಿರುದ್ಧವಾಗಿದೆ : ಬಿಜೆಪಿ ಬಸವ ಕಾಯಕಜೀವಿಗಳ ಸಂಘದಿಂದ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್, ಪುಸ್ತಕ ವಿತರಣೆ ಪಾಲಿಕೆಗೆ 250 ಕೋಟಿ ವಿಶೇಷ ಅನುದಾನ ಕೋರಿ ಸಿಎಂ ಗೆ ಮೇಯರ್, ಉಪಮೇಯರ್ ಮನವಿ ಮೂರು ದಿನಗಳ RSS ಬೈಟಕ್ ಮುಕ್ತಾಯ: ಶ್ರೀರಾಮ ಜನ್ಮಭೂಮಿ ಮಂದಿರದ ದಾನ ಪೆಟ್ಟಿಗೆಯ ಕಾಣಿಕೆಯ ಅಕ್ರಮಕ್ಕೆ ಖೇದ ಎಸ್‌ಐಆರ್ (SIR) ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಿದೆ ಸಚಿವ ಸತೀಶ್ ಜಾರಕಿಹೊಳಿ ವೈಜ್ಞಾನಿಕತೆ ಶಿಕ್ಷಣದಲ್ಲಿ ಬರದೆ ಹೋದರೆ ಮೌಢ್ಯಗಳು ಹಾಗೆ ಮುಂದುವರಿಯುವಂತ ಕೆಲಸಗಳು ನಡೆಯುತ್ತದೆ - ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನಾಡಗೀತೆಯಲ್ಲಿ ಬೌದ್ಧ ಧರ್ಮದ ಹೆಸರು ಸೇರಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸರ್ಕಾರಕ್ಕೆ ಮನವಿ ಹಕ್ಕಿ-ಪಿಕ್ಕಿ ಸಮುದಾಯದ ಮೂಲಭೂತ ಸಮಸ್ಯೆಗಳ ಶಾಶ್ವತ ಪರಿಹಾರಕ್ಕಾಗಿ ಸರ್ಕಾರ ಮಟ್ಟದಲ್ಲಿ ಕ್ರಮ - ಸಿಇಓ ಬೆಳಗಾವಿ ಪಾಲಿಕೆಗೆ ಅನುದಾನ ಬಿಡುಗಡೆ ಮಾಡದಂತೆ ಗಡಿ ಕನ್ನಡ ಸೇನೆ ಆಗ್ರಹ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯ ಘೋಷಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅನ್ಯರಿಗೆ ಶಾಶ್ವತ ನಿವಾಸ ಪ್ರಮಾಣಪತ್ರ ನೀಡುವುದು ಸಾಂವಿಧಾನಿಕ ಚೌಕಟ್ಟಿಗೆ ವಿರುದ್ಧವಾಗಿದೆ : ಬಿಜೆಪಿ ಬಸವ ಕಾಯಕಜೀವಿಗಳ ಸಂಘದಿಂದ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್, ಪುಸ್ತಕ ವಿತರಣೆ ಪಾಲಿಕೆಗೆ 250 ಕೋಟಿ ವಿಶೇಷ ಅನುದಾನ ಕೋರಿ ಸಿಎಂ ಗೆ ಮೇಯರ್, ಉಪಮೇಯರ್ ಮನವಿ ಮೂರು ದಿನಗಳ RSS ಬೈಟಕ್ ಮುಕ್ತಾಯ: ಶ್ರೀರಾಮ ಜನ್ಮಭೂಮಿ ಮಂದಿರದ ದಾನ ಪೆಟ್ಟಿಗೆಯ ಕಾಣಿಕೆಯ ಅಕ್ರಮಕ್ಕೆ ಖೇದ ಎಸ್‌ಐಆರ್ (SIR) ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಿದೆ ಸಚಿವ ಸತೀಶ್ ಜಾರಕಿಹೊಳಿ ವೈಜ್ಞಾನಿಕತೆ ಶಿಕ್ಷಣದಲ್ಲಿ ಬರದೆ ಹೋದರೆ ಮೌಢ್ಯಗಳು ಹಾಗೆ ಮುಂದುವರಿಯುವಂತ ಕೆಲಸಗಳು ನಡೆಯುತ್ತದೆ - ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ
16 ಜುಲೈ 2026
ವೈಜ್ಞಾನಿಕತೆ ಶಿಕ್ಷಣದಲ್ಲಿ ಬರದೆ ಹೋದರೆ  ಮೌಢ್ಯಗಳು ಹಾಗೆ ಮುಂದುವರಿಯುವಂತ ಕೆಲಸಗಳು ನಡೆಯುತ್ತದೆ - ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ
📚 ಸಾಹಿತ್ಯ
Dr. K N Doddmani · · 70 ವೀಕ್ಷಣೆಗಳು

ವೈಜ್ಞಾನಿಕತೆ ಶಿಕ್ಷಣದಲ್ಲಿ ಬರದೆ ಹೋದರೆ ಮೌಢ್ಯಗಳು ಹಾಗೆ ಮುಂದುವರಿಯುವಂತ ಕೆಲಸಗಳು ನಡೆಯುತ್ತದೆ - ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ

ನಾಗಮೋಹನ್ ದಾಸ್ ಅವರ "ಮೆಮೋರೆಬಲ್ ಟ್ರಯಲ್ಸ್ - ಅವಿಸ್ಮರಣೀಯ ಪ್ರಕರಣಗಳು" ಕೃತಿ ಲೋಕಾರ್ಪಣೆ ಕಾರ್ಯಕ್ರಮ

ಅಸ್ಮಿತೆ ವರದಿ, ಜು.೧೧: ವೈಜ್ಞಾನಿಕತೆ ಶಿಕ್ಷಣದಲ್ಲಿ ಬರದೆ ಹೋದರೆ ಮೌಢ್ಯಗಳು ಹಾಗೆ ಮುಂದುವರಿಯುವಂತ ಕೆಲಸಗಳು ನಡೆಯುತ್ತದೆ ಎಂದರು. ಸಮಾಜ ಮೌಢ್ಯಗಳಿಂದ ದೂರ ಇರಬೇಕಂದರೆ ನಾವೆಲ್ಲರೂ ಕೂಡ ಮೌಢ್ಯಗಳನ್ನು ಆಚರಣೆ ಮಾಡುವಂತ ಕೆಲಸವನ್ನು ಬಿಡಬೇಕು. ಹಾಗೆ ಮಾಡಿದರೆ ಮಾತ್ರ ಜಾತಿ ವ್ಯವಸ್ಥೆ ಹೋಗಲಾಡಿಸಲು ಸಾಧ್ಯ ಎಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಅವರು ಬರೆದಿರುವ "ಮೆಮೋರೆಬಲ್ ಟ್ರಯಲ್ಸ್ - ಅವಿಸ್ಮರಣೀಯ ಪ್ರಕರಣಗಳು" ಕೃತಿಯ ಕನ್ನಡ ಹಾಗೂ ಇಂಗ್ಲೀಷ್ ಆವೃತ್ತಿಯನ್ನು ಇಂದು ಲೋಕಾರ್ಪಣೆಗೊಳಿಸಿ, ಮಾತನಾಡಿದರು.

ಎಲ್ಲಿಯವರೆಗೆ ಎಲ್ಲಾ ವರ್ಗದವರಿಗೆ ಆರ್ಥಿಕ, ಸಮಾಜಿಕ ಶಕ್ತಿಯನ್ನು ನಾವು ಕೊಡುವುದಿಲ್ಲವೋ ಅಲ್ಲಿಯವರೆಗೆ ಅಸಮಾನತೆ ಹೋಗುವುದಿಲ್ಲ. ನಾಗಮೋಹನ್‌ ದಾಸ್‌ ಅವರು ಅನೇಕ ಅವಿಸ್ಮರಣೀಯ ಪ್ರಕರಣಗಳನ್ನು ಆಯ್ಕೆ ಮಾಡಿಕೊಂಡು ಅದರಲ್ಲಿ 21 ಘಟನೆಯ ಪ್ರಕರಣಗಳನ್ನು ಮೆಮೋರೆಬಲ್ ಟ್ರಯಲ್ಸ್ - ಅವಿಸ್ಮರಣೀಯ ಪ್ರಕರಣಗಳು ಪುಸ್ತಕದಲ್ಲಿ ಬರೆದಿದ್ದಾರೆ. ಈ ದೇಶದಲ್ಲಿ ಹೋರಾಡಿದವರ, ಜನಸಮಾನ್ಯರ ಸಮಸ್ಯೆಗಳನ್ನು ಕೈಗೆತ್ತಿಕೊಂಡು ಹೋರಾಡಿದವರ ಬಗ್ಗೆ ಹಾಗೂ ದೇಶಕ್ಕಾಗಿ ಬಲಿದಾನ, ತ್ಯಾಗ ಮಾಡಿದವವ ಕುರಿತು ಬಹಳ ಸ್ಪಷ್ಟವಾಗಿ ಈ ಪುಸ್ತಕದಲ್ಲಿ ತಿಳಿಸಿದ್ದಾರೆ ಎಂದರು

ನಮ್ಮ ಸಮಾಜದಲ್ಲಿ ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು, ಯಾರಿಗೆ ಇತಿಹಾಸ ಗೊತ್ತಿರುವುದಿಲ್ಲವೋ ಅವರು ಯಾರು ಕೂಡ ಭವಿಷ್ಯವನ್ನು ನಿರ್ಮಾಣ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಇಂದು ನಮ್ಮ ಸಮಾಜದಲ್ಲಿ ಅಸಮಾನತೆ ಇದೆ. ಯಾಕೆ ಅಸಮಾನತೆ ಇದೆ ಎನ್ನುವುದು ಇತಿಹಾಸದಿಂದ ಗೊತ್ತಾಗಬೇಕು ಅಲ್ಲವೇ ಎಂದು ಪ್ರಶ್ನಿಸಿದರು. ಅಂಬೇಡ್ಕರ್‌ ಮಾತಿನಂತೆ ಎಲ್ಲಿಯವರೆಗೆ ಅಸಮಾನತೆ ಹೋಗುವುದಿಲ್ಲ ಅಲ್ಲಿಯವರೆಗೆ ಸಮಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಸಮಸಮಾಜ ನಿರ್ಮಾಣ ಆಗದೆ ಹೋದರೆ ಸಮಾಜದಲ್ಲಿ ನಡೆಯುತ್ತಿರುವಂತ ಶೋಷಣೆ, ಜಾತಿ ವ್ಯವಸ್ಥೆ ನಿಲ್ಲುವುದಿಲ್ಲ ಎಂದರು. ಈ ಜಾತಿ ವ್ಯವಸ್ಥೆ ಹೋಗಬೇಕಾದರೆ ಸಂವಿಧಾನ ಬದಲಾಗಬೇಕು. ಅಸಮಾನತೆ ತೊಲಗಬೇಕು.

ಸತ್ಯ ಯಾವುದು ಅಸತ್ಯ ಯಾವುದು ಎಂಬುದನ್ನು ಗುರುತಿಸುವ ಕೆಲಸ ಮಾಡಬೇಕು. ನಾವು ನಮ್ಮ ಸರ್ಕಾರದಲ್ಲಿ ʼಮೌಢ್ಯಗಳ ನಿಷೇಧ ಕಾಯ್ದೆʼ ಜಾರಿ ಮಾಡಿದ್ದೇವೆ. ಬಸವಣ್ಣನವರು ಬದುಕಿದ್ದಷ್ಟು ದಿನ ಮೌಢ್ಯಗಳನ್ನು ತಿರಸ್ಕಾರ ಮಾಡಿದರು. ವಚನ ಸಾಹಿತ್ಯವನ್ನು ನಿರ್ಮಾಣ ಮಾಡಿದರು. ಹೀಗಿದ್ದರೂ ಮೌಢ್ಯಗಳು ಇನ್ನೂ ಜೀವಂತವಾಗಿದೆ. ವಿದ್ಯಾವಂತರೇ ಮೌಢ್ಯಯಗಳನ್ನು ಆಚರಿಸುತ್ತಾರೆ. ಪಟ್ಟಭದ್ರ ಹಿತಾಸಕ್ತಗಳ ವಿರುದ್ಧ ಮಾತನಾಡಿದರೆ ನಮ್ಮ- ನಿಮ್ಮ ಮೇಲೆ ಪ್ರಕರಣ ದಾಖಲಿಸುತ್ತಾರೆ. ಪ್ರಕರಣ ದಾಖಲಿಸಿದರು ಪರವಾಗಿಲ್ಲ. ಆ ನಿಟ್ಟಿನಲ್ಲಿ ನಾವೆಲ್ಲ ಪ್ರಯತ್ನ ಪಡಬೇಕು.

ಬಲಿದಾನವೇ ನಮ್ಮ ಇತಿಹಾಸ, ಅದೇ ನಮಗೆ ಧರ್ಮಗ್ರಂಥ. ಸಂವಿಧಾನದ ರೀತಿಯಲ್ಲಿ ನಡೆದುಕೊಂಡರೆ ನಿಮ್ಮ ಜವಾಬ್ದಾರಿಗಳೇನು, ನಿಮ್ಮ ಕರ್ತವ್ಯಗಳೇನು ಎಂದು ತಿಳಿಯುತ್ತದೆ. ಕರ್ತವ್ಯಗಳನ್ನು ನಿರ್ವಹಿಸುವಂತಹ ಕೆಲಸವನ್ನು ಮಾಡಿದಾಗ ನಾವು ಸಂವಿಧಾನದ ರೀತಿ ನಡೆಯುತ್ತಿದ್ದೇವೆ ಎಂದು ಆಗುತ್ತದೆ. ನಾನು ಮುಖ್ಯಮಂತ್ರಿಯಾಗಿ ಪ್ರಾಮಾಣಿಕ ಕೆಲಸವನ್ನು ಮಾಡಿದ್ದೇನೆ. 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದಾಗ ನಮ್ಮ ಪಕ್ಷದವರೇ ಟೀಕೆಗಳನ್ನು ಮಾಡಿದ್ದರು. ಅದರ ಮಹತ್ವ ಏನೆಂದು ಅವರಿಗೆ ಈಗ ಗೊತ್ತಾಗುತ್ತಿದೆ. ಅದು ಅಸಮಾನತೆ ನಿರ್ಮೂಲನೆ ಮಾಡುವಂತಹ ಕಾರ್ಯಕ್ರಮ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಮಾರಂಭದಲ್ಲಿ ಬಹುಭಾಷಾ ನಟ ಪ್ರಕಾಶ್ ರಾಜ್, ಲೇಖಕಿ ತಸ್ರಿಮ್ ಮುಲ್ಲಾ, ಇಂಗ್ಲಿಷ್ ಆವೃತ್ತಿಯ ಅನುವಾದಕರಾದ ಬಿ.ಎಸ್.ಲೋಕೇಶ್‌ಚಂದ್ರ, ಜನ ಸಂಸ್ಕೃತಿ ಅಧ್ಯಯನ ಮತ್ತು ಪ್ರಕಾಶನದ ಬಿ.ರಾಜಶೇಖರಮೂರ್ತಿ ಅವರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ