ಬ್ರೇಕಿಂಗ್
ಎಸ್‌ಐಆರ್ (SIR) ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಿದೆ ಸಚಿವ ಸತೀಶ್ ಜಾರಕಿಹೊಳಿ ವೈಜ್ಞಾನಿಕತೆ ಶಿಕ್ಷಣದಲ್ಲಿ ಬರದೆ ಹೋದರೆ ಮೌಢ್ಯಗಳು ಹಾಗೆ ಮುಂದುವರಿಯುವಂತ ಕೆಲಸಗಳು ನಡೆಯುತ್ತದೆ - ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ 60 ಸಾವಿರ ಬೀದಿ ವ್ಯಾಪಾರಸ್ಥರಿಗೆ ಗುರುತಿನ ಚೀಟಿ ಮೂಲಕ ಪರ್ಯಾಯ ವ್ಯವಸ್ಥೆ : ಮುಖ್ಯಮಂತ್ರಿ ಕುಡಿಯುವ ನೀರಿನ ಸಮಸ್ಯೆಯ ನಿಭಾವಣೆಗೆ ಗ್ರಾಮೀಣ ಪ್ರದೇಶದ ಪ್ರತಿ‌ಕ್ಷೇತ್ರದ ಶಾಸಕರಿಗೆ ತಲಾ ಒಂದು ಕೋಟಿ ಅನುದಾನ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್  ಭಾರತ ಜೋಡೋ ಯುವಕ ಸಂಘ ಸ್ಥಾಪನೆಗೆ ಸಾವಿರ ಕೋಟಿ ರೂಪಾಯಿ ಮೀಸಲು - ಡಿ.ಕೆ. ಶಿವಕುಮಾರ ಜನರ ಅಹವಾಲು ಪರಿಹರಿಸಲು ಪ್ರಜಾಸೇವಾ ಇಲಾಖೆ : ಪ್ರತ್ಯೇಕ ಮಂತ್ರಿಯೊಬ್ಬರ ನಿಯೋಜಿನೆ- ಮುಖ್ಯಮಂತ್ತಿ ಡಿ.ಕೆ.ಶಿವಕುಮಾರ್ ಬೆಳಗಾವಿ ಅರಣ್ಯ ವಲಯದ 7 ಜಲಪಾತ ವೀಕ್ಷಣೆಗೆ  ಇನ್ನೊಂದು ತಿಂಗಳಲ್ಲಿ ಪರಿಸರ ಸ್ನೇಹಿ ಇಕೋ ಟೂರಿಸಂ ಅವಕಾಶ : ಜಿಲ್ಲಾಧಿಕಾರಿ ಮೊಹಮ್ಮದ ರೋಷನ್‌   ಬೆಳಗಾವಿ ಜಿಲ್ಲೆಯಲ್ಲಿ ಉತ್ತಮ ಮಳೆ: ಮೈದುಂಬಿ ಹರಿಯುತ್ತಿರುವ ನದಿಗಳು; ಕೆಳ ಹಂತದ ೭ ಸೇತುವೆಗಳು ಜಲಾವೃತ್ತ ಶರಣರ ಅನುಭವ ಮಂಟಪಕ್ಕೆ ಭೆಟ್ಟಿ ನೀಡಿದ AI ರೇಖಾ ಚಿತ್ರಗಳನ್ನು ಹಂಚಿಕೊಂಡ ಮುಖ್ಯಮಂತ್ರಿ ಅಂಗನವಾಡಿಯಿಂದ ಪಿಯುಸಿ ವರೆಗೂ ನಾಳೆ ರಜೆ ಎಸ್‌ಐಆರ್ (SIR) ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಿದೆ ಸಚಿವ ಸತೀಶ್ ಜಾರಕಿಹೊಳಿ ವೈಜ್ಞಾನಿಕತೆ ಶಿಕ್ಷಣದಲ್ಲಿ ಬರದೆ ಹೋದರೆ ಮೌಢ್ಯಗಳು ಹಾಗೆ ಮುಂದುವರಿಯುವಂತ ಕೆಲಸಗಳು ನಡೆಯುತ್ತದೆ - ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ 60 ಸಾವಿರ ಬೀದಿ ವ್ಯಾಪಾರಸ್ಥರಿಗೆ ಗುರುತಿನ ಚೀಟಿ ಮೂಲಕ ಪರ್ಯಾಯ ವ್ಯವಸ್ಥೆ : ಮುಖ್ಯಮಂತ್ರಿ ಕುಡಿಯುವ ನೀರಿನ ಸಮಸ್ಯೆಯ ನಿಭಾವಣೆಗೆ ಗ್ರಾಮೀಣ ಪ್ರದೇಶದ ಪ್ರತಿ‌ಕ್ಷೇತ್ರದ ಶಾಸಕರಿಗೆ ತಲಾ ಒಂದು ಕೋಟಿ ಅನುದಾನ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್  ಭಾರತ ಜೋಡೋ ಯುವಕ ಸಂಘ ಸ್ಥಾಪನೆಗೆ ಸಾವಿರ ಕೋಟಿ ರೂಪಾಯಿ ಮೀಸಲು - ಡಿ.ಕೆ. ಶಿವಕುಮಾರ ಜನರ ಅಹವಾಲು ಪರಿಹರಿಸಲು ಪ್ರಜಾಸೇವಾ ಇಲಾಖೆ : ಪ್ರತ್ಯೇಕ ಮಂತ್ರಿಯೊಬ್ಬರ ನಿಯೋಜಿನೆ- ಮುಖ್ಯಮಂತ್ತಿ ಡಿ.ಕೆ.ಶಿವಕುಮಾರ್ ಬೆಳಗಾವಿ ಅರಣ್ಯ ವಲಯದ 7 ಜಲಪಾತ ವೀಕ್ಷಣೆಗೆ  ಇನ್ನೊಂದು ತಿಂಗಳಲ್ಲಿ ಪರಿಸರ ಸ್ನೇಹಿ ಇಕೋ ಟೂರಿಸಂ ಅವಕಾಶ : ಜಿಲ್ಲಾಧಿಕಾರಿ ಮೊಹಮ್ಮದ ರೋಷನ್‌   ಬೆಳಗಾವಿ ಜಿಲ್ಲೆಯಲ್ಲಿ ಉತ್ತಮ ಮಳೆ: ಮೈದುಂಬಿ ಹರಿಯುತ್ತಿರುವ ನದಿಗಳು; ಕೆಳ ಹಂತದ ೭ ಸೇತುವೆಗಳು ಜಲಾವೃತ್ತ ಶರಣರ ಅನುಭವ ಮಂಟಪಕ್ಕೆ ಭೆಟ್ಟಿ ನೀಡಿದ AI ರೇಖಾ ಚಿತ್ರಗಳನ್ನು ಹಂಚಿಕೊಂಡ ಮುಖ್ಯಮಂತ್ರಿ ಅಂಗನವಾಡಿಯಿಂದ ಪಿಯುಸಿ ವರೆಗೂ ನಾಳೆ ರಜೆ
11 ಜುಲೈ 2026
ಮೇಘಮೈತ್ರಿ ಸಾಹಿತ್ಯ ಸಂಭ್ರಮ:  ಸಂಘ - ಸಂಸ್ಥೆಗಳ ಪ್ರಶಸ್ತಿ ಪ್ರದಾನ ಪರಂಪರೆ  ಗೌರವಯುತ ಕಾರ್ಯ - ಎಚ್.ಐ. ತಿಮ್ಮಾಪುರ
📚 ಸಾಹಿತ್ಯ
Dr. K N Doddmani · · 99 ವೀಕ್ಷಣೆಗಳು

ಮೇಘಮೈತ್ರಿ ಸಾಹಿತ್ಯ ಸಂಭ್ರಮ: ಸಂಘ - ಸಂಸ್ಥೆಗಳ ಪ್ರಶಸ್ತಿ ಪ್ರದಾನ ಪರಂಪರೆ  ಗೌರವಯುತ ಕಾರ್ಯ - ಎಚ್.ಐ. ತಿಮ್ಮಾಪುರ

ಅಸ್ಮಿತೆ ಸುದ್ದಿ : ಬಾಗಲಕೋಟ ಜಿಲ್ಲೆ ಕಮತಗಿ ಮೇಘಮೈತ್ರಿ ಸಾಹಿತ್ಯ ಸಂಘ ನಿಯೋಜಿತ  ಕೃತಿ ಲೋಕಾರ್ಪಣೆ, ಉಪನ್ಯಾಸ, ಕವಿಗೋಷ್ಠಿ ಹಾಗೂ ಸಾಧಕರಿಗೆ  ಪ್ರಶಸ್ತಿ ಪ್ರದಾನ ವರ್ಣರಂಚಿತ  ಸಮಾರಂಭ ಜರುಗಿತು.

ವಿವಿಧ ಕ್ಷೇತ್ರಗಳಿಗೆ ಮೇಘಮೈತ್ರಿ ಸಂಸ್ಥೆ ಕೊಡಮಾಡುವ ವಿವಿಧ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿದ  ನಿವೃತ್ತ ಪ್ರಾಚಾರ್ಯ ಡಾ. ಎಚ್. ಐ. ತಿಮ್ಮಾಪುರ, "ಸರ್ಕಾರ ಮಟ್ಟದಲ್ಲಿ ನೀಡಲಾಗುವ  ಪ್ರಶಸ್ತಿ ಸನ್ಮಾನಗಳು ಉನ್ನತ ಸಾಧಕ ಪರಿಚಿತ ವ್ಯಕ್ತಿತ್ವಗಳಿಗೆ. ಆದರೆ,  ಎಲೆ ಮರೆಯ ಕಾಯಿಯಂತೆ  ಸಮಾಜದಲ್ಲಿ ಸೇವೆಯಲ್ಲಿರುವರನ್ನು ಹತ್ತಿರದಿಂದ ಗಮನಿಸಿ ಸಂಘ ಸಂಸ್ಥೆಗಳು ಗೌರವ ಸಮ್ಮಾನ ನೆರವೇರಿಸುತ್ತವೆ. ಇಂಥ ಪರಂಪರೆಯ ದ್ಯುತಕವಾಗಿ ಕಮತಗಿ ಮೇಘಮೈತ್ರಿ ಸಾಹಿತ್ಯ ಸಂಘ ಒಂದು ಸಂಭ್ರಮವನ್ನಾಗಿ ಮುಂದುವರೆಸುತ್ತಿರುವುದು ಶ್ಲಾಘನೀಯ" ಎಂದು ಮೆಚ್ಚುಗೆ ಸೂಚಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ ಬೆಳಗಾವಿ ಮಹಾನಗರ ಪಾಲಿಕೆ ಉಪ ಆಯುಕ್ತ ಸಿದ್ದು ಹುಲ್ಲೊಳ್ಳಿ, "ಸಾಹಿತ್ಯ - ಸಾಂಸ್ಕೃತಿಕ ಕಾರ್ಯಕ್ರಮಗಳು  ಸಾಂಪ್ರದಾಯಿಕ ರೂಪರೇಷ ಬದಲಾಯಿಸಿ ಸಮಯ ಪ್ರಜ್ಞೆಯೊಂದಿಗೆ ಸುಧಾರಣೆ ತಂದುಕೊಳ್ಳುವುದು ಹೆಚ್ಚು ಅಗತ್ಯವಿದೆ" ಎಂದರು.

ಬೆಳಗಾವಿ ಮಾರ್ಕೇಟ್ ಪೊಲೀಸ್ ಠಾಣೆಯ ಸಿಪಿಐ ಜೆ.ಎಂ. ಕಾಲಿಮಿರ್ಚಿ, ಬೆಳಗಾವಿಯಲ್ಲಿ ಕನ್ನಡಮಯ ವಾತಾವರಣ ನಿರ್ಮಿಸುವಲ್ಲಿ ಕನ್ನಡಪರ ಸಂಘಟನೆಗಳು ಹಾಗೂ ಬರಹಗಾರರ ಮಾಡಿದ ಕಾರ್ಯ ಸಾಧನೆ ಅನುಪಮವಾದದ್ದು ಎಂದು ಸ್ಮರಿಸಿಕೊಂಡರು.

ದಿವ್ಯ ಸಾನಿಧ್ಯ ವಹಿಸಿದ್ದ ಕೂಡಸಂಗಮ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠದ ಶ್ರೀ ಬಸವ‌ ಜಯ ಮೃತ್ಯುಂಜಯ ಸ್ವಾಮಿಜಿಯವರು, ಪ್ರಸ್ತುತ ಸಮಾಜದಲ್ಲಿ ಹಲವಾರು ಸಾಮಾಜಿಕ‌ ಪ್ರಶ್ನೆಗಳು ನಮ್ಮೆದುರಿಗಿದ್ದು ಅವುಗಳಿಗೆ ಸೂಕ್ತ‌ಉತ್ತರ ಕಂಡುಕೊಳ್ಳುವ ಕೆಲಸ ಸಂವೇದನಾಶೀಲ ಬರಹಗಾರರಿಂದ ನಡೆಯಬೇಕು. ಈ ಭಾಗದ ಬಸವರಾಜ ಕಟ್ಟಿಮನಿ ಈ ರೀತಿ‌ ಬರೆದ ನಾಡಿನ ಅತೀ ದೊಡ್ಡ ಬರಹಗಾರರು ಎಂದು ಸ್ಮರಿಸಿಕೊಂಡರು.

ಬೆಳಗಾವಿ ಲಿಂಗರಾಜ್ ಕಾಲೇಜಿನ ಪ್ರಾಚಾರ್ಯ ಡಾ. ಹನುಮಂತ ಮೇಲಿಮನಿ, ಮನಸಲಾಜಿ ಆಫ್ ಮಾನಿನಿ, ಕವನ ಕೌಸ್ತುಭ ಮತ್ತು ವಚನ ವೈಭವ ಕೃತಿಗಳನ್ನು ಲೋಕಾರ್ಪಣೆಗೊಳಿಸಿದರು.

ಮೇಘಮೈತ್ರಿ ಸಂಘದ ಅಧ್ಯಕ್ಷ ಎಂ. ರಮೇಶ, ಸಂಘದ ಸಾಹಿತ್ಯ - ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಪರಂಪರೆ ಕುರಿತು ಮಾಹಿತಿ ನೀಡಿದರು. ಸಂಘದ ಸ್ವಾಗತ ಸಮಿತಿ ಅಧ್ಯಕ್ಷ ಡಾ. ಪ್ರಕಾಶ ನರಗುಂದ ಆಶಯ‌ ಮಾತಗಳನ್ನಾಡಿದರು.

ವೇದಿಕೆಯ ಮೇಲೆ ಬಸವರಾಜ ಕಟ್ಟೀಮನಿ ಪ್ರತಿಷ್ಠಾನದ ಅಧ್ಯಕ್ಷ ಡಾ.‌ಯಲ್ಲಪ್ಪ ಹಿಮ್ಮಡಿ, ಲೇಖಕ ಯ.ರು. ಪಾಟೀಲ, ಸಾಮ್ಯುಯೆಲ್ ಡೇನಿಯಲ್, ಚಂದ್ರಶೇಖರ ದೇಸಾಯಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು

ನಂತರ ಡಾ. ಎಚ್. ಐ. ತಿಮ್ಮಾಪುರ ಅಧ್ಯಕ್ಷತೆಯಲ್ಲಿ ನಡೆದ ಕವಿಗೋಷ್ಠಿಯಲ್ಲಿ ಅನೇಕ ಕವಿಗಳು ಸ್ವರಚಿತ ಕವಿತೆಗಳನ್ನು ನಿರೂಪಿಸಿದರು. ಕಾವ್ಯ ರಚನೆ ಕುರಿತು ಡಾ. ಕೆ. ಎನ್. ದೊಡ್ಡಮನಿ ಮಾತನಾಡಿದರು.

ಪ್ರಾಧ್ಯಾಪಕ ಅಶೋಕ ಕಾಂಬಳೆ ಸ್ವಾಗತಗೀತೆ ಹಾಡಿದರು. ಡಾ. ಅನುರಾಧಾ ಕಂಚಿ ಕಾರ್ಯಕ್ರಮ ನಿರೂಪಿಸಿದರು.

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

ವೈಜ್ಞಾನಿಕತೆ ಶಿಕ್ಷಣದಲ್ಲಿ ಬರದೆ ಹೋದರೆ  ಮೌಢ್ಯಗಳು ಹಾಗೆ ಮುಂದುವರಿಯುವಂತ ಕೆಲಸಗಳು ನಡೆಯುತ್ತದೆ - ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಾಹಿತ್ಯ

ವೈಜ್ಞಾನಿಕತೆ ಶಿಕ್ಷಣದಲ್ಲಿ ಬರದೆ ಹೋದರೆ ಮೌಢ್ಯಗಳು ಹಾಗೆ ಮುಂದುವರಿಯುವಂತ ಕೆಲಸಗಳು ನಡೆಯುತ್ತದೆ - ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ

ನಾಗಮೋಹನ್ ದಾಸ್ ಅವರ "ಮೆಮೋರೆಬಲ್ ಟ್ರಯಲ್ಸ್ - ಅವಿಸ್ಮರಣೀಯ ಪ್ರಕರಣಗಳು" ಕೃತಿ ಲೋಕಾರ್ಪಣೆ ಕಾರ್ಯಕ್ರಮ

Admin