ನಾಡಗೀತೆಯಲ್ಲಿ ಬೌದ್ಧ ಧರ್ಮದ ಹೆಸರು ಸೇರಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸರ್ಕಾರಕ್ಕೆ ಮನವಿ
ಈ ಬಗ್ಗೆ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅವರು ಆಕಾಶವಾಣಿಯೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ.
ಅಸ್ಮಿತೆ ವರದಿ, ಜು.14 ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆಯಲ್ಲಿ ಬೌದ್ಧ ಧರ್ಮದ ಹೆಸರನ್ನು ಸೇರಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಡಾ. ಪುರುಷೋತ್ತಮ ಬಿಳಿಮಲೆ ಸಮಿತಿಯು ಶಿಫಾರಸು ಮಾಡಿದ್ದು, ಸರ್ಕಾರಕ್ಕೆ ಮನವಿ ಸಲ್ಲಿಸಿದೆ.
ಆಕಾಶವಾಣಿಯೊಂದಿಗೆ ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಪುರುಷೋತ್ತಮ ಬಿಳಿಮಲೆ ಅವರು, ಧರ್ಮ, ಸಮಾನತೆ ಮತ್ತು ಬೌದ್ಧ ಧರ್ಮದ ಪ್ರಭಾವ ಹೆಚ್ಚಾದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಕುವೆಂಪು ಅವರು ಬರೆದಿದ್ದ ನಾಡಗೀತೆಯಲ್ಲಿ ಬೌದ್ಧ ಧರ್ಮದ ಹೆಸರನ್ನು ಕೈಬಿಡಲಾಗಿತ್ತು. ಪ್ರಸ್ತುತ ಹಾಡಿನಲ್ಲಿ 'ಜೈನರ ಪೂಜ್ಯ ಉದ್ಯಾನ' ಎಂಬ ಸಾಲಿದೆ. ಇನ್ನು ಮುಂದೆ ಈ ಸಾಲನ್ನು 'ಜೈನ ಬೌದ್ಧರ ಪೂಜ್ಯ ಉದ್ಯಾನ' ಅಥವಾ 'ಜೈನರುದ್ಯಾನದ ಜೊತೆಗೆ ಬೌದ್ಧರುದ್ಯಾನ' ಎಂದು ಬದಲಾಯಿಸಲು ಪ್ರಸ್ತಾಪ ಸಲ್ಲಿಸಲಾಗಿದೆ ಎಂದು ಹೇಳಿದ್ದಾರೆ.
**
ಈ ಲೇಖನ ಹಂಚಿಕೊಳ್ಳಿ