ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ರಾಷ್ಟ್ರೀಯ ಡೈವಿಂಗ್‌ ಸ್ಪರ್ಧೆಗೆ ಯುವರಾಜ, ಅರ್ಣವ, ಶ್ರೇಯಾ, ತನ್ವಿ ಆಯ್ಕೆ
🎭 ಸಾಂಸ್ಕೃತಿಕ
Dr. K N Doddmani · · 28 ವೀಕ್ಷಣೆಗಳು

ರಾಷ್ಟ್ರೀಯ ಡೈವಿಂಗ್‌ ಸ್ಪರ್ಧೆಗೆ ಯುವರಾಜ, ಅರ್ಣವ, ಶ್ರೇಯಾ, ತನ್ವಿ ಆಯ್ಕೆ

ಕ್ರೀಡಾಪಟುಗಳ ಸಾಧನೆ ಹಾಗೂ ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುವುದಕ್ಕೆ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಅಭಿನಂದನೆ ಸಲ್ಲಿಸಿ, ರಾಷ್ಟ್ರೀಯ ಸ್ಪರ್ಧೆಯಲ್ಲೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದ್ದಾರೆ.

ಅಸ್ಮಿತೆ ವರದಿ, ಅ.೨೧ : ಬೆಂಗಳೂರಿನ ಕೆನ್ಸಿಂಗ್ಟನ್‌ ಈಜುಕೊಳದಲ್ಲಿ ಇತ್ತೀಚೆಗೆ ನಡೆದ ಕರ್ನಾಟಕ ರಾಜ್ಯ ಸಬ್‌ ಜೂನಿಯರ್‌ ಹಾಗೂ ಜೂನಿಯರ್‌ ಡೈವಿಂಗ್‌ ಚಾಂಪಿಯನ್‌ಶಿಪ್‌ನಲ್ಲಿ ಬೆಳಗಾವಿಯ ಆಬಾ ಹಿಂದ್‌ ಸ್ಪೋರ್ಟ್ಸ್‌ ಕ್ಲಬ್‌ನ ಕ್ರೀಡಾಪಟುಗಳು ಅತ್ಯುತ್ತಮ ಸಾಧನೆ ಮಾಡಿದ್ದು, ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆಯಲಿರುವ ರಾಷ್ಟ್ರೀಯ ಡೈವಿಂಗ್‌ ಸ್ಪರ್ಧೆಗೆ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಲಿದ್ದಾರೆ.

ಸ್ಪರ್ಧೆಯಲ್ಲಿ ಕ್ಲಬ್‌ನ ಕ್ರೀಡಾಪಟುಗಳು ಮೂರು ವೈಯಕ್ತಿಕ ಚಾಂಪಿಯನ್‌ಶಿಪ್‌ಗಳೊಂದಿಗೆ ಒಟ್ಟು ಆರು ಚಿನ್ನ, ಒಂದು ಬೆಳ್ಳಿ ಹಾಗೂ ಒಂದು ಕಂಚಿನ ಪದಕ ಸೇರಿದಂತೆ ಎಂಟು ಪದಕಗಳನ್ನು ಗೆದ್ದಿದ್ದಾರೆ.

17 ವರ್ಷದೊಳಗಿನವರ ವಿಭಾಗದಲ್ಲಿ ಯುವರಾಜ ಮೊಹನಗೆಕರ ಅವರು 1 ಮೀಟರ್‌ ಹಾಗೂ 3 ಮೀಟರ್‌ ಸ್ಪ್ರಿಂಗ್‌ಬೋರ್ಡ್‌ ವಿಭಾಗದಲ್ಲಿ ಎರಡು ಚಿನ್ನದ ಪದಕಗಳನ್ನು ಗೆದ್ದು ವೈಯಕ್ತಿಕ ಚಾಂಪಿಯನ್‌ಶಿಪ್‌ ಪಡೆದುಕೊಂಡಿದ್ದಾರೆ.

14 ವರ್ಷದೊಳಗಿನವರ ವಿಭಾಗದಲ್ಲಿ ಅರ್ಣವ್‌ ಚಿವಟೆ ಅವರು 1 ಮೀಟರ್‌ ಹಾಗೂ 3 ಮೀಟರ್‌ ಸ್ಪ್ರಿಂಗ್‌ಬೋರ್ಡ್‌ ವಿಭಾಗದಲ್ಲಿ ಎರಡು ಚಿನ್ನದ ಪದಕಗಳನ್ನು ಗೆದ್ದು ವೈಯಕ್ತಿಕ ಚಾಂಪಿಯನ್‌ಶಿಪ್‌ ತಮ್ಮದಾಗಿಸಿಕೊಂಡಿದ್ದಾರೆ.

ತನ್ವಿ ಮುಚಂಡಿ ಅವರು 3 ಮೀಟರ್‌ ಸ್ಪ್ರಿಂಗ್‌ಬೋರ್ಡ್‌ನಲ್ಲಿ ಚಿನ್ನ ಹಾಗೂ 1 ಮೀಟರ್‌ ಸ್ಪ್ರಿಂಗ್‌ಬೋರ್ಡ್‌ನಲ್ಲಿ ಬೆಳ್ಳಿ ಪದಕ ಗೆದ್ದು ವೈಯಕ್ತಿಕ ಚಾಂಪಿಯನ್‌ಶಿಪ್‌ ಪಡೆದಿದ್ದಾರೆ. ಶ್ರೇಯಾ ಜೋಗಮನವರ ಅವರು 1 ಮೀಟರ್‌ ಸ್ಪ್ರಿಂಗ್‌ಬೋರ್ಡ್‌ನಲ್ಲಿ ಚಿನ್ನದ ಪದಕ ಗೆದ್ದರೆ, ಓವಿ ಜಾಧವ್ ಅವರು 3 ಮೀಟರ್‌ ಸ್ಪ್ರಿಂಗ್‌ಬೋರ್ಡ್‌ನಲ್ಲಿ ಕಂಚಿನ ಪದಕ ಪಡೆದುಕೊಂಡಿದ್ದಾರೆ.

ಕ್ರೀಡಾಪಟುಗಳ ಈ ಸಾಧನೆಗೆ ಆಬಾ ಹಿಂದ್‌ ಸ್ಪೋರ್ಟ್ಸ್‌ ಕ್ಲಬ್‌ನ ಎನ್‌ಐಎಸ್‌ ಈಜು ತರಬೇತುದಾರರಾದ ವಿಶ್ವಾಸ ಪವಾರ್‌ ಹಾಗೂ ಭರತ್‌ ಪಾಟೀಲ ಅವರ ಅಮೂಲ್ಯ ತರಬೇತಿ ಮತ್ತು ಮಾರ್ಗದರ್ಶನ ದೊರೆತಿದೆ. ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ, ನಗರಸೇವಕರಾದ ನಿತಿನ್‌ ಜಾಧವ್‌ ಹಾಗೂ ಜಯಂತ್‌ ಜಾಧವ್‌, ಆಬಾ ಸ್ಪೋರ್ಟ್ಸ್‌ ಕ್ಲಬ್‌ ಅಧ್ಯಕ್ಷೆ ಶೀತಲ್‌ ಹುಲಭತೆ ಹಾಗೂ ಹಿಂದ್‌ ಸ್ಪೋರ್ಟ್ಸ್‌ ಅಧ್ಯಕ್ಷ ಅರವಿಂದ್‌ ಸಂಗೋಳಿ ಅವರು ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುತ್ತಿದ್ದಾರೆ.

ರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆ: ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಉತ್ತಮ ಸಾಧನೆ ಮಾಡಿದ ಯುವರಾಜ ಮೊಹನಗೆಕರ, ಅರ್ಣವ್‌ ಚಿವಟೆ, ಶ್ರೇಯಾ ಜೋಗಮನವರ ಹಾಗೂ ತನ್ವಿ ಮುಚಂಡಿ ಅವರು ಸೆಪ್ಟೆಂಬರ್‌ 7ರಿಂದ 12ರವರೆಗೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆಯಲಿರುವ ರಾಷ್ಟ್ರೀಯ ಡೈವಿಂಗ್‌ ಸ್ಪರ್ಧೆಗೆ ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಕ್ರೀಡಾಪಟುಗಳ ಸಾಧನೆ ಹಾಗೂ ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುವುದಕ್ಕೆ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಅಭಿನಂದನೆ ಸಲ್ಲಿಸಿ, ರಾಷ್ಟ್ರೀಯ ಸ್ಪರ್ಧೆಯಲ್ಲೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ವಿಜೇತ ಡೈವಿಂಗ್‌ ಕ್ರೀಡಾಪಟುಗಳೊಂದಿಗೆ ಶಾಸಕ ಅಭಯ ಪಾಟೀಲ, ನಗರಸೇವಕರಾದ ನಿತಿನ್‌ ಜಾಧವ್‌ ಹಾಗೂ ಜಯಂತ್‌ ಜಾಧವ್‌, ಈಜು ತರಬೇತುದಾರ ವಿಶ್ವಾಸ ಪವಾರ್‌ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.

**

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ