ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಬಸವ ಅಧ್ಯಯನ ಪೀಠ ಸ್ಥಾಪನೆ
ಅಸ್ಮಿತೆ ವರದಿ, ಜು.31: ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿ "ಬಸವ ಅಧ್ಯಯನ ಪೀಠ" ಸ್ಥಾಪಿಸಲಾಗಿದೆ.
ಸಾಂಸ್ಕೃತಿಕ ನಾಯಕ, ಸಮಾನತೆಯ ಹರಿಕಾರ ವಿಶ್ವಗುರು ಬಸವಣ್ಣನವರ ಕುರಿತಾದ ಅಧ್ಯಯನ ಪೀಠವೊಂದನ್ನು ಸ್ಥಾಪಿಸುವಂತೆ ಜಾಗತೀಕ ಲಿಂಗಾಯತ ಮಹಾಸಭೆ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಎಂ.ಜಾಮದಾರ ಹಾಗೂ ಬೆಳಗಾವಿ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ರೊಟ್ಟಿ ನೇತೃತ್ವದ ನಿಯೋಗವು ಎರಡು ವರ್ಷಗಳ ಹಿಂದೆ ಮನವಿ ಸಲ್ಲಿಸಲಾಗಿತ್ತು. ಬೇಡಿಕೆ ಈಡೇರಿದಕ್ಕೆ ಮಹಾಸಭೆ ಸಂತಸ ವ್ಯಕ್ತಪಡಿಸಿದೆ.
ಜಾಗತಿಕ ಲಿಂಗಾಯಿತ ಮಹಾಸಭೆ ಹಾಗೂ ಬಸವಪರ ಸಂಘಟನೆಗಳ ಪದಾಧಿಕಾರಿಗಳು ವಿಶ್ವವಿದ್ಯಾಲಯಕ್ಕೆ ತೆರಳಿ ಕುಲಪತಿ ತ್ಯಾಗರಾಜ್, ಕುಲಸಚಿವ ಸಂತೋಷ್ ಕಾಮಗೌಡ ಮತ್ತು ಸಿಂಡಿಕೇಟ್ ಸದಸ್ಯ ಡಾ. ಮಹಾಂತೇಶ್ ಕಂಬಾರ್ ಅವರನ್ನು ಗೌರವಿಸಿ ಅಭಿನಂದಿಸಿದೆ.
ಈ ಸಂದರ್ಭದಲ್ಲಿ ಲಿಂಗಾಯಿತ ಮಹಾಸಭೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶೋಕ್ ಮಳಗಲಿ, ಉಪಾಧ್ಯಕ್ಷ ಮುರುಗೇಶ ಶಿವಪೂಜಿ ಸೇರಿದಂತೆ ಮುರಗೆಪ್ಪ ಬಾಳಿ, ಸಿ.ಎಂ. ಬೂದಿಹಾಳ, ಪ್ರವೀಣ್ ಚಿಕ್ಕಲಿ, ಶಂಕರ್ ಗುಡುಸ್, ಅಶೋಕ್ ಬೆಂಡಿಗೇರಿ, ಶಿವಾನಂದ್ ಮೇಟ್ಯಾಳ್, ಆನಂದ್ ಗುಡುಸ, ಮಹಾನಂದಾ ಪರುಶೆಟ್ಟಿ, ಶೋಭಾ ಶಿವಳ್ಳಿ, ಕಾವೇರಿ ಕಿಲಾರಿ, ರತ್ನಾ ಬೆಣಚಿನಮರಡಿ, ಗುರು ಗೌಡಾ ಮುಂತಾದವರು ಉಪಸ್ಥಿತರಿದ್ದರು.
ಈ ಲೇಖನ ಹಂಚಿಕೊಳ್ಳಿ