ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ಎಂಜನಿಯರಿಂಗ್ ಪರೀಕ್ಷೆ ಮುಗಿಸಿ ಹೊರಬರುವಷ್ಟರಲ್ಲಿ ಫಲಿತಾಂಶ ಲಭ್ಯ - ವಿಟಿಯು ಸಾಧನೆ
🎓 ಶಿಕ್ಷಣ
Dr. K N Doddmani · · 175 ವೀಕ್ಷಣೆಗಳು

ಎಂಜನಿಯರಿಂಗ್ ಪರೀಕ್ಷೆ ಮುಗಿಸಿ ಹೊರಬರುವಷ್ಟರಲ್ಲಿ ಫಲಿತಾಂಶ ಲಭ್ಯ - ವಿಟಿಯು ಸಾಧನೆ

6ನೇ ಸೆಮಿಸ್ಟರ್ ಪರೀಕ್ಷೆಗೆ ರಾಜ್ಯದ ವಿವಿಧ ಕಾಲೇಜುಗಳಲ್ಲಿ  60 ಸಾವಿರದ 856 ವಿದ್ಯಾರ್ಥಿಗಳು ಹಾಜರಿದ್ದರು. ಈ ಪೈಕಿ 46 ಸಾವಿರದ 762 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಪ್ರತಿಶತ 76.84 ಫಲಿತಾಂಶ ದಾಖಲಾಗಿದೆ. ಇತ್ತೀಚಿಗೆ 8 ನೇ ಸೆಮಿಸ್ಟರ್ ಫಲಿತಾಂಶವನ್ನು ಕೇವಲ 10 ನಿಮಿಷದಲ್ಲಿ ಪ್ರಕಟಿಸಲಾಗಿತ್ತು. ಈ ಮೂಲದ  ಫಲಿತಾಂಶ ಪ್ರಕಟಿಸಲು 10 ರಿಂದ 12 ದಿನಗಳ ತೆಗೆದುಕೊಳ್ಳಲಾಗುತ್ತಿತ್ತು. ಪ್ರಸ್ತುತ 5 ನಿಮಿಷದಲ್ಲಿ ಫಲಿತಾಂಶ ನೀಡಲಾಗಿದೆ.

ಎಂಜನಿಯರಿಂಗ್ ಪರೀಕ್ಷೆ ಮುಗಿಸಿ ಹೊರಬರುವಷ್ಟರಲ್ಲಿ ಫಲಿತಾಂಶ ಲಭ್ಯ - ವಿಟಿಯು ಸಾಧನೆ

**

ಅಸ್ಮಿತೆ ಸುದ್ದಿ: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಅಧೀನದ ರಾಜ್ಯದ ವಿವಿಧ ಎಂಜನಿಯರಿಂಗ್ ‌ಕಾಲೇಜುಗಳಲ್ಲಿ 6 ನೇ ಸೆಮಿಸ್ಟರ್ ನಲ್ಲಿ   ಓದುತ್ತಿರುವ ಸುಮಾರು 60 ಸಾವಿರ ವಿದ್ಯಾರ್ಥಿಗಳು ಇಂದು ಸಂಜೆ 5.30ಕ್ಕೆ  ಕೊನೆಯ ಪ್ರಾಯೋಗಿಕ ಪರೀಕ್ಷೆ ಮುಗಿಸಿ ಹೊರ ಬರುವಷ್ಟರಲ್ಲಿ ಅಂದರೆ  5 ನಿಮಿಷದಲ್ಲಿ ವಿಟಿಯು ಫಲಿತಾಂಶ ಪ್ರಕಟಿಸಿ ದಾಖಲೆ ಸೃಷ್ಟಿಸಿದೆ.

ಕಳೆದ 15 ದಿನಗಳಿಂದ ನಡೆದ ಲಿಖಿತ ಪರೀಕ್ಷೆಯ ಡಿಜಿಟಲ್ ಮೌಲ್ಯಮಾಪನ ಒಂದು ವಾರಕಾಲ ಪೂರ್ಣಗೊಳಿಸಿ ಅಂಕಗಳನ್ನು ಅಪ್ಲೋಡ್ ಮಾಡಿ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆಯಾ ಪ್ರಾಯೋಗಿಕ ಪರೀಕ್ಷೆ ಮುಕ್ತಾಯದ ನಂತರ ತಾಂತ್ರಿಕ ಸಹಾಯದಿಂದ ಅಂಕಗಳನ್ನು ಭರ್ತಿ ಮಾಡಲಾಗಿತ್ತು. ಇಂದು ಕೊನೆಯ ಪ್ರಾಯೋಗಿಕ ಪರೀಕ್ಷೆ ಮುಗಿದ ಐದು ನಿಮಿಷದಲ್ಲಿ ಆಯಾ ಕಾಲೇಜು ಕೇಂದ್ರಗಳಿಂದ ಅಂಕಗಳ ಅಪ್ಲೋಡ್ ಮಾಡಿ ತಕ್ಷಣ ಪರೀಕ್ಷೆ ಬರೆದ ವಿದ್ಯಾರ್ಥಿಗಳ ಮೊಬೈಲ್ ಗಳಿಗೆ ಫಲಿತಾಂಶದ ಎಸ್.ಎಮ್.ಎಸ್. ಮಾಹಿತಿಯನ್ನು ರವಾನಿಸುವುದರ ಮೂಲಕ ವಿಟಿಯು ತನ್ನ ತಾಂತ್ರಿಕ ಮಹೋನ್ನತಿಯನ್ನು ಸಾಬೀತುಪಡಿಸಿದೆ.

ಈ ಬಗ್ಗೆ ಮಾಹಿತಿ ನೀಡಿದ ಕುಲಸಚಿವ ಡಾ.ಪ್ರಸಾದ ಬಿ. ರಾಂಪುರೆ, ಆಧುನಿಕ ತಾಂತ್ರಿಕತೆಯ ಸಹಕಾರ, ವಿಶ್ವವಿದ್ಯಾಲಯದ ಕುಲಪತಿ ಪ್ರೊಫೆಸರ್ ಎಸ್. ವಿದ್ಯಾಶಂಕರ ಅವರ ಕ್ರಿಯಾಶೀಲತೆ ಮತ್ತು ಎಲ್ಲ ಸಿಬ್ಬಂದಿ ವರ್ಗದ ಸಾಮೂಹಿಕ ಜವಾಬ್ದಾರಿ ನಿರ್ವಹಣೆಯಿಂದಾಗಿ ವಿದ್ಯಾರ್ಥಿಗಳಿಗೆ ತ್ವರಿತವಾಗಿ ಫಲಿತಾಂಶ ನೀಡುವುದರ ಮೂಲಕ ವಿಟಿಯು ಐತಿಹಾಸಿಕ ದಾಖಲೆ ನಿರ್ಮಿಸಿದೆ. ವಿದ್ಯಾರ್ಥಿಗಳ ಮುಂದಿನ ಓದು ಅಥವಾ ಭವಿಷ್ಯ ನಿರ್ಮಾಣಕ್ಕೆ ಅನುಕೂಲತೆಯ ದೃಷ್ಟಿಯಿಂದ ತಾಂತ್ರಿಕ ಸಾಧನ ಬಳಸಿ ಫಲಿತಾಂಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಜಂಟಿ ಮಾಹಿತಿ

ವಿಟಿಯು ಮೌಲ್ಯಮಾಪನ ಕುಲಸಚಿವ ಪ್ರೊ.ಯು.ಜೆ.ಉಜ್ವಲ್, 6ನೇ ಸೆಮಿಸ್ಟರ್ ಪರೀಕ್ಷೆಗೆ ರಾಜ್ಯದ ವಿವಿಧ ಕಾಲೇಜುಗಳಲ್ಲಿ  60 ಸಾವಿರದ 856 ವಿದ್ಯಾರ್ಥಿಗಳು ಹಾಜರಿದ್ದರು. ಈ ಪೈಕಿ 46 ಸಾವಿರದ 762 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಪ್ರತಿಶತ 76.84 ಫಲಿತಾಂಶ ದಾಖಲಾಗಿದೆ. ಇತ್ತೀಚಿಗೆ 8 ನೇ ಸೆಮಿಸ್ಟರ್ ಫಲಿತಾಂಶವನ್ನು ಕೇವಲ 10 ನಿಮಿಷದಲ್ಲಿ ಪ್ರಕಟಿಸಲಾಗಿತ್ತು. ಈ ಮೂಲದ  ಫಲಿತಾಂಶ ಪ್ರಕಟಿಸಲು 10 ರಿಂದ 12 ದಿನಗಳ ತೆಗೆದುಕೊಳ್ಳಲಾಗುತ್ತಿತ್ತು. ಪ್ರಸ್ತುತ 5 ನಿಮಿಷದಲ್ಲಿ ಫಲಿತಾಂಶ ನೀಡಲಾಗಿದೆ. ಫಲಿತಾಂಶ ಪ್ರಕಟಿಸುವ ಅವಸರದಲ್ಲಿ ದೋಷಗಳಿಗೆ ಅವಕಾಶ ಕೊಡದೆ, ಮೌಲ್ಯಮಾಪನದ ಗುಣಮಟ್ಟ ಕಾಯ್ದುಕೊಂಡು ಫಲಿತಾಂಶ ಪ್ರಕಟಿಸಲಾಗಿದೆ ಎಂದು ತಿಳಿಸಿದ್ದಾರೆ.

ವಿಟಿಯು ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್, "ಪರೀಕ್ಷೆ ಬರೆದ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿರುತ್ತಾರೆ. ಹೀಗಾಗಿ ನಾವು ಸಾಧ್ಯವಾದಷ್ಟು ಬೇಗ ಫಲಿತಾಂಶ ಪ್ರಕಟಿಸಲು ನಿರ್ಧರಿಸಿ, ಆ ಪ್ರಕಾರ ಸಿದ್ಧತೆ ನಡೆಸಿ ಫಲಿತಾಂಶ ಬಿಡುಗಡೆ ಮಾಡಿದ್ದೇವೆ. ಈ ಹಿಂದೆ ಅಂತಿಮ ವರ್ಷದ ವಿದ್ಯಾರ್ಥಿಗಳ ಫಲಿತಾಂಶವನ್ನು 10 ನಿಮಿಷಗಳ ಒಳಗಾಗಿ ಬಿಡುಗಡೆ ಮಾಡಲಾಗಿತ್ತು. ಇದಕ್ಕೆ ಸಹಕಾರ ನೀಡಿದ ವಿಟಿಯು ಆಡಳಿತ ಸಿಬ್ಬಂದಿ, ಪರೀಕ್ಷಾ ವಿಭಾಗದ ಸಿಬ್ಬಂದಿ ಮತ್ತು ಸಂಯೋಜಿತ ಕಾಲೇಜುಗಳ ಸಿಬ್ಬಂದಿಗೆ ಅಭಿನಂದನೆ ತಿಳಿಸುತ್ತೇನೆ" ಎಂದಿದ್ದಾರೆ.

**

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ