ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
70 ಸಾವಿರ ಹುದ್ದೆಗಳು, 35 ಲಕ್ಷ ಅರ್ಜಿ ನಿರೀಕ್ಷೆ: ಇಡೀ ದೇಶಕ್ಕೆ ಮಾದರಿಯಲ್ಲಿ ಅತ್ಯಂತ ಪಾರದರ್ಶಕ ನೇಮಕಾತಿ : ಸಿಎಮ್ ನಿರ್ಧಾರ
💼 ಉದ್ಯೋಗ
Dr. K N Doddmani · · 176 ವೀಕ್ಷಣೆಗಳು

70 ಸಾವಿರ ಹುದ್ದೆಗಳು, 35 ಲಕ್ಷ ಅರ್ಜಿ ನಿರೀಕ್ಷೆ: ಇಡೀ ದೇಶಕ್ಕೆ ಮಾದರಿಯಲ್ಲಿ ಅತ್ಯಂತ ಪಾರದರ್ಶಕ ನೇಮಕಾತಿ : ಸಿಎಮ್ ನಿರ್ಧಾರ

ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವುದರಲ್ಲಿ ಯಾವುದೇ ಲೋಪವಾದರೂ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು (SP) ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು. ಸಂಪೂರ್ಣ ಪಾರದರ್ಶಕ ಹಾಗೂ ಮೆರಿಟ್ ಆಧಾರಿತ ನೇಮಕಾತಿ ನಡೆಸಲು ನಮ್ಮ ಸರ್ಕಾರ ಬದ್ಧವಾಗಿದೆ.

ಅಸ್ಮಿತೆ ವರದಿ, ಜು.31: ಕರ್ನಾಟಕದಾದ್ಯಂತ 70,000ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳ ನೇಮಕಾತಿ ಸಿದ್ಧತೆ ನಡೆದಿದ್ದು, ಮುಂಬರುವ ಕೆಪಿಎಸ್‌ಸಿ ಮತ್ತು ಕೆಇಎ ಪರೀಕ್ಷೆಗಳಿಗೆ ಸುಮಾರು 35 ಲಕ್ಷ ಅಭ್ಯರ್ಥಿಗಳು ಹಾಜರಾಗುವ ನಿರೀಕ್ಷೆಯಿದೆ. ಸಂಪೂರ್ಣ ನೇಮಕಾತಿ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಬೇಕು ಮತ್ತು ಯಾವುದೇ ರೀತಿಯ ಅಕ್ರಮಗಳು ನಡೆಯದಂತೆ ತಡೆಯಬೇಕು ಎಂದು ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಲಾಗಿದ್ದು, ನೇಮಕಾತಿ ಪ್ರಕ್ರಿಯೆ ಇಡೀ ದೇಶದಲ್ಲಿ ಮಾದರಿಯಾಗಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸ್ಪಷ್ಟಪಡಿಸಿದ್ದಾರೆ.

ನೇಮಕಾತಿ ಪ್ರಕ್ರಿಯೆ ಪರಿಶೀಲಿಸಲು ಗೃಹ ಪ್ರಿಯಾಂಕ್ ಖರ್ಗೆ, ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಹಿರಿಯ ಅಧಿಕಾರಿಗಳು ಹಾಗೂ ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ವಿಧಾನಸೌಧದಲ್ಲಿ ಇಂದು ಉನ್ನತ ಮಟ್ಟದ ಸಭೆಯನ್ನು ನಡೆಸಿದ ನಂತರ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ‌ಯನ್ನು ಅವರು ಹಂಚಿಕೊಂಡಿದ್ದಾರೆ.

ಪರೀಕ್ಷೆಯ ಪ್ರತಿಯೊಂದು ಹಂತವನ್ನೂ ವಿಡಿಯೋ ರೆಕಾರ್ಡ್ ಮಾಡಲಾಗುತ್ತದೆ. ಖಾಸಗಿ ಕೋಚಿಂಗ್ ಸೆಂಟರ್‌ಗಳ ಮೇಲೆ ತೀವ್ರ ನಿಗಾ ಇಡಲು ಪೊಲೀಸರಿಗೆ ಸೂಚಿಸಲಾಗಿದ್ದು, ಪರೀಕ್ಷಾ ಕರ್ತವ್ಯನಿರತ ಯಾವುದೇ ಅಧಿಕಾರಿ ಅಥವಾ ಸಿಬ್ಬಂದಿ ಮೊಬೈಲ್ ಫೋನ್ ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವುದರಲ್ಲಿ ಯಾವುದೇ ಲೋಪವಾದರೂ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು (SP) ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು. ಸಂಪೂರ್ಣ ಪಾರದರ್ಶಕ ಹಾಗೂ ಮೆರಿಟ್ ಆಧಾರಿತ ನೇಮಕಾತಿ ನಡೆಸಲು ನಮ್ಮ ಸರ್ಕಾರ ಬದ್ಧವಾಗಿದೆ.

ಈ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಮಗ್ರ ಸುಧಾರಣೆಗಳನ್ನು ತರಲು ಎಸ್. ವಿ. ರಂಗನಾಥ್ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗುತ್ತಿದೆ. ಟಿ. ಎಂ. ವಿಜಯಭಾಸ್ಕರ್, ವಂದಿತಾ ಶರ್ಮಾ ಹಾಗೂ ಎಲ್. ಕೆ. ಅತೀಕ್ ಅವರು ಈ ಸಮಿತಿಯ ಸದಸ್ಯರಾಗಿರಲಿದ್ದಾರೆ.

ಪಾರದರ್ಶಕ ಹಾಗೂ ನಂಬಿಕಾರ್ಹ ನೇಮಕಾತಿ ಪ್ರಕ್ರಿಯೆಯಲ್ಲಿ ಕರ್ನಾಟಕವು ಇಡೀ ದೇಶಕ್ಕೇ ಮಾದರಿಯಾಗಬೇಕು. ಪ್ರತಿಯೊಬ್ಬ ಅರ್ಹ ಅಭ್ಯರ್ಥಿಗೂ ನಮ್ಮ ವ್ಯವಸ್ಥೆಯ ಮೇಲೆ ಸಂಪೂರ್ಣ ಭರವಸೆ ಇರಬೇಕು; ಆ ನಂಬಿಕೆಯನ್ನು ಉಳಿಸಿಕೊಳ್ಳುವುದು ನಮ್ಮ ಆದ್ಯತೆಯಾಗಿರಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ತಿಳಿಸಿದ್ದಾರೆ.

**

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ