ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ಬೃಹತ್ ಕನಸುಗಳೊಂದಿಗೆ ನಿರಂತರ ಶ್ರಮ ಅಗತ್ಯ:  ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್
💼 ಉದ್ಯೋಗ
Dr. K N Doddmani · · 44 ವೀಕ್ಷಣೆಗಳು

ಬೃಹತ್ ಕನಸುಗಳೊಂದಿಗೆ ನಿರಂತರ ಶ್ರಮ ಅಗತ್ಯ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್

ಅಸ್ಮಿತೆ ವರದಿ, ಅ.೨೫: "ಜೀವನ ಸಾಧನೆಯ ಆಕಾಂಕ್ಷಿಯ ಯುವಕರು ತಮ್ಮ ಬೃಹತ್ ಕನಸುಗಳೊಂದಿಗೆ ತಮ್ಮ ಮೇಲೆ ತಾವೇ ನಂಬಿಕೆ ಕಾಯ್ದುಕೊಂಡು, ನಿರ್ಧಿಷ್ಟ ಗುರಿಯ ಬೆನ್ನಿಗೆ ಬಿದ್ದು ನಿರಂತರ ಶ್ರಮಿಸಿ"  ಯುವ ಸಮುದಾಯ ಐಕಾನ್ ಎಂದು ಗುರುತಿಸಲ್ಪಡುವ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಮುಜಾವರ್ ಫೆಡರೇಶನ್ ಇಂದು  ಬೆಳಗಾವಿ ಕ್ಯಾಂಪ್‌ ಪ್ರದೇಶದ ಇಸ್ಲಾಮಿಯಾ ಹೈಸ್ಕೂಲ್  ಹಾಜಿ ಅಬ್ದುಲ್ ಗಫರ್ ಮುಜಾವರ್ ಸ್ಮಾರಕ ಸಭಾಂಗಣದಲ್ಲಿ ಆಯೋಜಿಸಿದ್ದ ಭಾರತೀಯ ನಾಗರಿಕ ಸೇವೆಗಳ ಜಾಗೃತಿ ಮತ್ತು ತರಬೇತಿ  ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

"ವಿದ್ಯಾರ್ಥಿಗಳು, ತಮ್ಮ ಜೀವನದಲ್ಲಿ  ಎದುರಾಗುವ ಕಷ್ಟಕರ ಹಂತಗಳನ್ನು ಜಯಸಾಧಿಸಲು ಆತ್ಮವಿಶ್ವಾಸ ವೃದ್ಧಿಸಿಕೊಳ್ಳಬೇಕು. ಸಾಮಾಜಿಕವಾಗಿ ಕೆಳ ಹಂತದಲ್ಲಿದ್ದಾಗ  ನಿಮ್ಮೊಳಗಿನ ಶಕ್ತಿ ಮತ್ತು ಆತ್ಮವಿಶ್ವಾಸವನ್ನು ಒಟ್ಟುಗೂಡಿಸಿ ಬಲವಾದ ನಂಬಿಕೆ ಮತ್ತು ವಿಶ್ವಾಸದೊಂದಿಗೆ ಮುಂದುವರೆಯ ಧೈರ್ಯದ ಪ್ರವೃತ್ತಿ ರೂಢಿಸಿಕೊಳ್ಳಬೇಕು" ಎಂದು ಕರೆ ನೀಡಿದರು.

ಪೊಲೀಸ್ ಆಯುಕ್ತ ಭೋರಸೆ ಭೂಷಣ್ ಗುಲಾಬರಾವ್, "ಯುಪಿಎಸ್‌ಸಿ ತಯಾರಿಗೆ ವ್ಯವಸ್ಥಿತ ಅಧ್ಯಯನ, ಸಕಾಲಿಕ ಸೂಕ್ತ ಮಾರ್ಗದರ್ಶನ, ಗುಣಮಟ್ಟದ ತರಬೇತಿ ಪರಿಣಾಮಕಾರಿಯಾಗುತ್ತದೆ. ಸಾರ್ವಜನಿಕ ಸೇವೆ ಕೇವಲ ಉದ್ಯೋಗಕ್ಕೆ ಸೀಮಿತವಾಗದೆ ಸಮಾಜಕ್ಕೆ ಉಪಯುಕ್ತವಾದ ಕೊಡುಗೆ ನೀಡುವುದರ ಮೂಲಕ ಆಳವಾದ ತೃಪ್ತ ಭಾವ ಅನುಭವಿಸುವ ವಿಶಾಲ ಮನಸ್ಥಿತಿಯನ್ನು ಬೆಳೆಸಿಕೊಳ್ಳಬೇಕು" ಎಂದು ತಿಳಿಸಿದರು.

ಪ್ರೊಬೇಷನರಿ ಐಎಎಸ್ ಅಧಿಕಾರಿ ರೋಹಿತ್ ಸಿಂಗ್, ಕರ್ನಾಟಕ ರಾಜ್ಯ ಮುಜಾವರ್ ಫೆಡರೇಶನ್ ಅಧ್ಯಕ್ಷ ರೇಹಾನ್ ಮುಜಾವರ್, ರಾಜ್ಯ ಉಪಾಧ್ಯಕ್ಷ ಉಸ್ಮಾನ್ ಮುಜಾವರ್, ಮುಸ್ಲಿಂ ಶಿಕ್ಷಣ ಸಮಾಜದ ಅಧ್ಯಕ್ಷ ಅಬ್ದುಲ್ ರಶೀದ್ ಮುಜಾವರ್ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.

***

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

70 ಸಾವಿರ ಹುದ್ದೆಗಳು, 35 ಲಕ್ಷ ಅರ್ಜಿ ನಿರೀಕ್ಷೆ: ಇಡೀ ದೇಶಕ್ಕೆ ಮಾದರಿಯಲ್ಲಿ ಅತ್ಯಂತ ಪಾರದರ್ಶಕ ನೇಮಕಾತಿ : ಸಿಎಮ್ ನಿರ್ಧಾರ ಉದ್ಯೋಗ

70 ಸಾವಿರ ಹುದ್ದೆಗಳು, 35 ಲಕ್ಷ ಅರ್ಜಿ ನಿರೀಕ್ಷೆ: ಇಡೀ ದೇಶಕ್ಕೆ ಮಾದರಿಯಲ್ಲಿ ಅತ್ಯಂತ ಪಾರದರ್ಶಕ ನೇಮಕಾತಿ : ಸಿಎಮ್ ನಿರ್ಧಾರ

ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವುದರಲ್ಲಿ ಯಾವುದೇ ಲೋಪವಾದರೂ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು (SP) ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು. ಸಂಪೂರ್ಣ ಪಾರದರ್ಶಕ ಹಾಗೂ ಮೆರಿಟ್ ಆಧಾರಿತ ನೇಮಕಾತಿ ನಡೆಸಲು ನಮ್ಮ ಸರ್ಕಾರ ಬದ್ಧವಾಗಿದೆ.

Admin